
ರಾಮನಗರ: ಆರ್. ಧ್ರುವನಾರಾಯಣ ಪುತ್ರ ದರ್ಶನ್ ಗೆ ನಂಜನಗೂಡು ಕ್ಷೇತ್ರದ ಟಿಕೆಟ್ ನೀಡುವ ವಿಚಾರದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜಡ್ಜ್ ಆಗಿದ್ದಾರೆ. ನಾನು ದರ್ಶನ್ ಪರ ವಕೀಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ರಾಮನಗರದಲ್ಲಿ ಮಾತನಾಡಿದ ಅವರು, ಧ್ರುವನಾರಾಯಣ ಅವರ ಅಂತಿಮ ದರ್ಶನ ಪಡೆಯಲು ಸ್ವತಃ ಮಲ್ಲಿಕಾರ್ಜುನ ಖರ್ಗೆ ಬಂದಿದ್ದರು. ಆರ್. ಧ್ರುವನಾರಾಯಣ ಅಭಿಮಾನಿಗಳ ಆಕ್ರಂದನವನ್ನು ಅವರು ಕಣ್ಣಾರೆ ಕಂಡಿದ್ದಾರೆ. ದರ್ಶನ್ ಟಿಕೆಟ್ ವಿಚಾರದಲ್ಲಿ ವರಿಷ್ಠರು ತೀರ್ಮಾನ ಮಾಡುತ್ತಾರೆ ಎಂದರು.
ಧ್ರುವನಾರಾಯಣ ಅವರಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ. ಹಳೆ ಮೈಸೂರು ಭಾಗದಲ್ಲಿ ಅವರು ಪಕ್ಷ ಸಂಘಟನೆಗೆ ಒತ್ತು ನೀಡಿದ್ದರು. ನನ್ನ ತಮ್ಮನಂತೆ ಇದ್ದರು ಎಂದು ಡಿಕೆಶಿ ಹೇಳಿದ್ದಾರೆ.