alex Certify ದರ್ಶನ್ ಗೆ ನಂಜನಗೂಡು ಕ್ಷೇತ್ರದ ಟಿಕೆಟ್ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಮಹತ್ವದ ಹೇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದರ್ಶನ್ ಗೆ ನಂಜನಗೂಡು ಕ್ಷೇತ್ರದ ಟಿಕೆಟ್ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಮಹತ್ವದ ಹೇಳಿಕೆ

ರಾಮನಗರ: ಆರ್. ಧ್ರುವನಾರಾಯಣ ಪುತ್ರ ದರ್ಶನ್ ಗೆ ನಂಜನಗೂಡು ಕ್ಷೇತ್ರದ ಟಿಕೆಟ್ ನೀಡುವ ವಿಚಾರದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜಡ್ಜ್ ಆಗಿದ್ದಾರೆ. ನಾನು ದರ್ಶನ್ ಪರ ವಕೀಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ರಾಮನಗರದಲ್ಲಿ ಮಾತನಾಡಿದ ಅವರು, ಧ್ರುವನಾರಾಯಣ ಅವರ ಅಂತಿಮ ದರ್ಶನ ಪಡೆಯಲು ಸ್ವತಃ ಮಲ್ಲಿಕಾರ್ಜುನ ಖರ್ಗೆ ಬಂದಿದ್ದರು. ಆರ್. ಧ್ರುವನಾರಾಯಣ ಅಭಿಮಾನಿಗಳ ಆಕ್ರಂದನವನ್ನು ಅವರು ಕಣ್ಣಾರೆ ಕಂಡಿದ್ದಾರೆ. ದರ್ಶನ್ ಟಿಕೆಟ್ ವಿಚಾರದಲ್ಲಿ ವರಿಷ್ಠರು ತೀರ್ಮಾನ ಮಾಡುತ್ತಾರೆ ಎಂದರು.

ಧ್ರುವನಾರಾಯಣ ಅವರಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ. ಹಳೆ ಮೈಸೂರು ಭಾಗದಲ್ಲಿ ಅವರು ಪಕ್ಷ ಸಂಘಟನೆಗೆ ಒತ್ತು ನೀಡಿದ್ದರು. ನನ್ನ ತಮ್ಮನಂತೆ ಇದ್ದರು ಎಂದು ಡಿಕೆಶಿ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...