
ಬೆಳಗಾವಿ: ಕರ್ನಾಟಕ ರಾಜ್ಯೋತ್ಸವಕ್ಕೆ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಭಾರಿ ಸಿದ್ಧತೆ ನಡೆದಿದೆ. ಈ ಬಾರಿ ರಾಜ್ಯೋತ್ಸವದ ದಿನದಂದು ಪ್ರತಿ ಮನೆಯ ಎದುರು ಕನ್ನಡದೀಪ ಬೆಳಗುವಂತೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಆದೇಶ ಹೊರಡಿಸಿದ್ದಾರೆ. ಈ ನಡುವೆ ಜಿಲ್ಲೆಯಾದ್ಯಂತ ರಾಜ್ಯೋತ್ಸವಕ್ಕೆ ಸಡಗರದ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಆದರೆ ರಾಜ್ಯೋತ್ಸವದ ಸಿದ್ಧತೆ ವೇಳೆಯೇ ದುರಂತವೊಂದು ಸಂಭವಿಸಿದೆ.
ಧ್ವಜಸ್ತಂಭ ನೆಡುತ್ತಿದ್ದ ವೇಳೆ ವಿದ್ಯುತ್ ಪ್ರವಹಿಸಿ ಯುವಕನೊಬ್ಬ ದಾರುಣವಾಗಿ ಸಾವನ್ನಪ್ಪಿದ್ದಾನೆ. ಬೈಲಹೊಂಗಲ ತಾಲೂಕಿನಲ್ಲಿ ಈ ದುರ್ಘಟನೆ ಸಂಭವಿಸಿದೆ.
ರಾಜ್ಯೋತ್ಸವ ಹಿನ್ನೆಲೆಯಲ್ಲಿ ಬೈಲಹೊಂಗಲ ತಾಲೂಕಿನ ವಕ್ಕುಂದ ಗ್ರಾಮದ ಬಸ್ ನಿಲ್ದಾಣದಲ್ಲಿ ಧ್ವಜ ಸ್ತಂಭ ನೆಡುತ್ತಿದ್ದ ವೇಳೆ ಯುವಕನಿಗೆ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಯುವಕ ಮೃತಪಟ್ಟಿದ್ದಾನೆ.
18 ವರ್ಷದ ಪ್ರಜ್ವಲ್ ಚನ್ನಗೌಡ ಮುನೇಪ್ಪನವರ ಮೃತ ದುರ್ದೈವಿ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.