ಮಧುಮೇಹ ಸಮಸ್ಯೆಯಿಂದ ಬಳಲುತ್ತಿರುವವರು ತಮ್ಮ ಆಹಾರದ ಬಗ್ಗೆ ತುಂಬಾ ಕಾಳಜಿ ವಹಿಸಬೇಕು. ಮಧುಮೇಹಿಗಳು ಅಡುಗೆಗೆ ಎಲ್ಲಾ ರೀತಿಯ ತೈಲಗಳನ್ನು ಬಳಸುವಂತಿಲ್ಲ. ಯಾಕೆಂದರೆ ಕೆಲವು ಅಡುಗೆ ತೈಲಗಳು ರಕ್ತದಲ್ಲಿನ ಸಕ್ಕರೆ ಮಟ್ಟದ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ ಇನ್ಸುಲಿನ್ ಪ್ರತಿರೋಧವನ್ನು ಸುಧಾರಿಸಲು ನಿಮ್ಮ ಆಹಾರದಲ್ಲಿ ಈ ಅಡುಗೆ ತೈಲಗಳನ್ನು ಬಳಸಿ.
*ವಾಲ್ನಟ್ ಎಣ್ಣೆ : ಇದು ಹೃದಯದ ಆರೋಗ್ಯವನ್ನು ಸುಧಾರಿಸುತ್ತದೆ. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡುತ್ತದೆ. ಹಾಗಾಗಿ ಟೈಪ್ 2 ಮಧುಮೇಹಿಗಳಿಗೆ ಇದು ತುಂಬಾ ಒಳ್ಳೆಯದು.
*ಎಳ್ಳಿನ ಎಣ್ಣೆ : ಎಳ್ಳು ಎಣ್ಣೆಯಲ್ಲಿ ವಿಟಮಿನ್ ಇ ಮತ್ತು ಇತರ ಉತ್ಕರ್ಷಣ ನಿರೋಧಕಗಳು ಇರುತ್ತದೆ. ಇದು ಮಧುಮೇಹಿದಿಂದ ಬಳಲುತ್ತಿರುವವರಿಗೆ ತುಂಬಾ ಒಳ್ಳೆಯದು. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡುತ್ತದೆ ಎಂಬುದು ಸಂಶೋಧನೆಯಿಂದ ತಿಳಿದು ಬಂದಿದೆ.
*ಅಗಸೆಬೀಜದ ಎಣ್ಣೆ : ಇದರಲ್ಲಿ ಫೈಬರ್ ಸಮೃದ್ಧವಾಗಿದೆ. ಇದು ಆಹಾರದಿಂದ ಗ್ಲೂಕೋಸ್ ನ್ನು ಜೀರ್ಣಿಸಿಕೊಳ್ಳಲು ಮತ್ತು ರಕ್ತಕ್ಕೆ ನಿಧಾನವಾಗಿ ಬಿಡುಗಡೆ ಮಾಡುವುದರ ಮೂಲಕ ರಕ್ತದಲ್ಲಿನ ಸಕ್ಕರೆ ಮಟ್ಟ ಹಠಾತ್ ಏರಿಕೆಯಾಗುವುದನ್ನು ತಡೆಯುತ್ತದೆ. ಇದರಲ್ಲಿ ಒಮೆಗಾ3 ಅಧಿಕವಾಗಿದೆ. ಇದು ಸಕ್ಕರೆ ಮಟ್ಟವನ್ನು ಹಾಗೂ ಇನ್ಸುಲಿನ್ ಮಟ್ಟವನ್ನುಸುಧಾರಿಸುತ್ತದೆ.