ಶಿವಮೊಗ್ಗ : ಶಿವಮೊಗ್ಗದಲ್ಲಿ ನಡೆದ ಕಲ್ಲು ತೂರಾಟ ಪ್ರಕರಣ ರಾಜಕೀಯ ಕೆಸರೆರಚಾಟಕ್ಕೂ ಕಾರಣವಾಗಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಶಾಸಕ ಸಿಟಿ ರವಿ ವಾಗ್ಧಾಳಿ ನಡೆಸಿದ್ದಾರೆ.
ಶಿವಮೊಗ್ಗದಲ್ಲಿ ಈದ್ ಮಿಲಾದ್ ನಡೆದಿದ್ದೋ ಅಥವಾ ಟಿಪ್ಪು ಜಯಂತಿ ನಡೆಸಿದ್ರೋ? ಸಿ.ಟಿ ರವಿ ವಾಗ್ದಾಳಿ ನಡೆಸಿದ್ದಾರೆ.ಈದ್ ಮಿಲಾದ್ ಮೆರವಣಿಗೆಯಲ್ಲಿ ತಲವಾರು ಹಿಡಿದು ಬೆದರಿಸುವ ಕೆಲಸ ಮಾಡಿದ್ದಾರೆ. ಮತ್ತೊಂದು ಪಾಕಿಸ್ತಾನ ಮಾಡುವ ಸಂಚು ಸ್ಪಷ್ಟವಾಗಿದೆ ಎಂದು ಬೆಂಗಳೂರಿನಲ್ಲಿ ಸರ್ಕಾರದ ವಿರುದ್ಧ ಮಾಜಿ ಶಾಸಕ ಸಿ.ಟಿ.ರವಿ ವಾಗ್ದಾಳಿ ಮಾಡಿದ್ದಾರೆ.
ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿದ ಮಾಜಿ ಸಚಿವ ಈಶ್ವರಪ್ಪ ಕಲ್ಲೇಟಿನಿಂದ ಗಾಯಗೊಂಡವರ ಆರೋಗ್ಯ ವಿಚಾರಿಸಿದರು. ನಿನ್ನೆ ನಡೆದ ಗಲಭೆಯಿಂದ ಶಿವಮೊಗ್ಗ ಬೂದಿ ಮುಚ್ಚಿದ ಕೆಂಡವಾಗಿದ್ದು, ನಗರದಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ.