ಭಾರತದ ಪ್ರಜಾಪ್ರಭುತ್ವ ಇತಿಹಾಸದಲ್ಲಿ ಮಹತ್ತರ ಕ್ಷಣಕ್ಕೆ ಸಾಕ್ಷಿಯಾಗಿರುವುದು ನನ್ನ ಅದೃಷ್ಟ ಎಂದು ನೂತನ ಸಂಸತ್ ಭವನದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಹೇಳಿದ್ದಾರೆ.
ನವದೆಹಲಿಯಲ್ಲಿ ಭಾನುವಾರ ಜರುಗಿದ ನೂತನ ಸಂಸತ್ ಭವನದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದ 91 ವರ್ಷ ವಯಸ್ಸಿನ ಹೆಚ್.ಡಿ. ದೇವೇಗೌಡರು ಸಂತೋಷವನ್ನು ವ್ಯಕ್ತಪಡಿಸಿದ್ದಾರೆ.
ನಾನು ತನ್ನ ಜೀವಿತಾವಧಿಯಲ್ಲಿ ಹೊಸ ಸಂಸತ್ತಿನ ಕಟ್ಟಡದಲ್ಲಿ ಕುಳಿತುಕೊಳ್ಳುತ್ತೇನೆ ಎಂದು ಯೋಚಿಸಿರಲಿಲ್ಲ ಎಂದು ಹೇಳಿದರು.
ಭಾರತದ ಪ್ರಜಾಸತ್ತಾತ್ಮಕ ಇತಿಹಾಸದಲ್ಲಿ ಮಹತ್ತರವಾದ ಕ್ಷಣಕ್ಕೆ ಸಾಕ್ಷಿಯಾಗಿರುವುದು ನನ್ನ ಸೌಭಾಗ್ಯ. 1962ರಲ್ಲಿ ಕರ್ನಾಟಕ ವಿಧಾನಸಭೆಗೆ ಪ್ರವೇಶಿಸಿ 1991ರಿಂದ ಸಂಸತ್ ಸದಸ್ಯನಾಗಿದ್ದೆ. 32 ವರ್ಷಗಳ ಹಿಂದೆ ಈ ಮಹಾಮನೆಯನ್ನು ಪ್ರವೇಶಿಸಿದಾಗ ನನಗೆ ನಾನು ಪ್ರಧಾನಿಯಾಗುತ್ತೇನೆ ಎಂದು ಎಂದಿಗೂ ಭಾವಿಸಿರಲಿಲ್ಲ ಮತ್ತು ಸಾರ್ವಜನಿಕ ಜೀವನದಲ್ಲಿ ಇಷ್ಟು ದಿನ ಇರುತ್ತೇನೆ ಎಂದು ನಾನು ನಿರೀಕ್ಷಿಸಿರಲಿಲ್ಲ ಎಂದು ದೇವೇಗೌಡರು ಹೇಳಿದರು.
ಆದರೆ ಇನ್ನೂ ದೊಡ್ಡ ಆಶ್ಚರ್ಯವೆಂದರೆ ನನ್ನ ಜೀವಿತಾವಧಿಯಲ್ಲಿ ನಾನು ಹೊಸ ಸಂಸತ್ತಿನ ಕಟ್ಟಡದಲ್ಲಿ ಕುಳಿತುಕೊಳ್ಳುತ್ತೇನೆ ಎಂದು ನಾನು ಎಂದಿಗೂ ಯೋಚಿಸಿರಲಿಲ್ಲ. ನನ್ನ 91 ನೇ ವಯಸ್ಸಿನಲ್ಲಿ ಹೊಸ ಸಂಸತ್ ಭವನದಲ್ಲಿ ಕೂತಿದ್ದೇನೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಭಾರತೀಯ ಸಂಪ್ರದಾಯದಲ್ಲಿ ಮತ್ತು ಸಾಮಾನ್ಯ ಭಾರತೀಯನ ಜೀವಿತಾವಧಿಯಲ್ಲಿ ಹೊಸ ಮನೆ ನಿರ್ಮಾಣ ಮತ್ತು ಹೊಸ ಮನೆಗೆ ಪ್ರವೇಶಿಸುವುದು ಅತ್ಯಂತ ಮಂಗಳಕರ ಮತ್ತು ಅಪರೂಪದ ಕ್ಷಣವಾಗಿದೆ . ಒಂದು ರಾಷ್ಟ್ರಕ್ಕೆ ಇದು ಅಸಾಧಾರಣ ಕ್ಷಣವಾಗಿದೆ ಎಂದು ಹೇಳಿದ್ದಾರೆ.