alex Certify ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಮಾಧ್ಯಮ ಸಲಹೆಗಾರ ಸದಾನಂದ ನಿಧನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಮಾಧ್ಯಮ ಸಲಹೆಗಾರ ಸದಾನಂದ ನಿಧನ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಮಾಧ್ಯಮ ಸಲಹೆಗಾರ ಕೆ.ಸಿ. ಸದಾನಂದ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಸೋಮವಾರ ರಾತ್ರಿ ಹೃದಯಾಘಾತವಾದ ತಕ್ಷಣ ಬೆಂಗಳೂರು ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ರಾತ್ರಿ 12 ಗಂಟೆ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಅವರು ಪತ್ನಿ, ಪುತ್ರ, ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಸದಾ ಕ್ರಿಯಾಶೀಲವಾಗಿದ್ದ ಚನ್ನಪಟ್ಟಣದ ಸದಾನಂದ ಸಂಜೆವಾಣಿ ಸೇರಿದಂತೆ ಹಲವು ಪತ್ರಿಕೆಯಲ್ಲಿ ಕೆಲಸ ಮಾಡಿದ್ದರು.

ಹೆಚ್.ಡಿ.ಕುಮಾರಸ್ವಾಮಿ ಅವರ ನಂಬಿಕಸ್ಥನಾಗಿದ್ದ ಸದಾನಂದ, ಈಗಲೂ ಅವರ ಮಾಧ್ಯಮ ಕಾರ್ಯದರ್ಶಿಯಾಗಿ ಕೆಲಸ ಮಾಡುತ್ತಿದ್ದರು.

ಸಂತಾಪ:

ಕೆ.ಸಿ.ಸದಾನಂದ ಅವರ ನಿಧನಕ್ಕೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ತೀವ್ರ ಸಂತಾಪ ವ್ಯಕ್ತಪಡಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...