ಮಂಗಳೂರು: ಮರದಿಂದ ಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಅರಿಯಡ್ಕದಲ್ಲಿ ನಡೆದಿದೆ.
ಕೃಷ್ಣಪ್ಪ(55) ಮೃತಪಟ್ಟವರು ಎಂದು ಹೇಳಲಾಗಿದೆ. ತಮ್ಮ ಮನೆಯ ಸಮೀಪದ ತೋಟದಲ್ಲಿ ಶುಕ್ರವಾರ ಮರ ಹತ್ತಿ ಕೊಂಬೆ ಕಡಿಯುವ ಸಂದರ್ಭದಲ್ಲಿ ಆಯತಪ್ಪಿ ಕೆಳಗೆ ಬಿದ್ದು ಕೃಷ್ಣಪ್ಪ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಶನಿವಾರ ಮೃತಪಟ್ಟಿದ್ದಾರೆ. ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವಿಕರಣ ದಾಖಲಾಗಿದೆ.