ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರು ಮಧುಮೇಹ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದು ದೇಹದ ಮೇಲೆ ಹಾನಿಯನ್ನುಂಟು ಮಾಡುತ್ತದೆ ಮತ್ತು ಹೃದ್ರೋಗ, ನರಗಳ ಹಾನಿ, ಕಣ್ಣಿನ ಸಮಸ್ಯೆ, ಮೂತ್ರಪಿಂಡದ ತೊಂದರೆ ಮುಂತಾದ ಸಮಸ್ಯೆಗೆ ಕಾರಣವಾಗುತ್ತದೆ. ರಕ್ತದಲ್ಲಿ ಸಕ್ಕರೆ ಮಟ್ಟ ಹೆಚ್ಚಾಗುವುದರಿಂದ ಈ ಸಮಸ್ಯೆ ಕಾಡುತ್ತದೆ. ಆದರೆ ಫೈಬರ್ ಸಮೃದ್ಧವಾಗಿರುವ ಆಹಾರವನ್ನು ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ಕಡಿಮೆಯಗುತ್ತದೆಯಂತೆ.
ಹೌದು. ಫೈಬರ್ ಸಮೃದ್ಧವಾಗಿರುವ ಆಹಾರವನ್ನು ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸುಧಾರಿಸಬಹುದು ಎಂದು ಅಧ್ಯಯನಗಳು ತೋರಿಸಿವೆ. ಇದು ಗ್ಲೈಸೆಮಿಕ್ ನಿಯಂತ್ರಣ, ದೇಹದ ತೂಕ ಮತ್ತು ಉರಿಯೂತವನ್ನು ಸುಧಾರಿಸಲು ಸಹಾಯ ಮಾಡುತ್ತದೆ.
ಫೈಬರ್ ಕರಗುವ ನಾರಿನಾಂಶವನ್ನು ಹೊಂದಿದ್ದು, ಇದು ಆಹಾರದಲ್ಲಿನ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸುತ್ತದೆ, ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿರ್ವಹಿಸಲು ಸಹಾಯ ಮಾಡುತ್ತದೆ. ಇದರಿಂದ ಹೃದಯವನ್ನು ಅಪಾಯದಿಂದ ಕಾಪಾಡುತ್ತದೆ. ಹಾಗಾಗಿ ಮಧುಮೇಹಿಗಳು ದಿನಕ್ಕೆ 20-35ಗ್ರಾಂನಷ್ಟು ಫೈಬರ್ ಸೇವಿಸುವಂತೆ ತಜ್ಞರು ಸಲಹೆ ನೀಡುತ್ತಾರೆ. ಆದ್ದರಿಂದ ತರಕಾರಿಗಳು, ಹಣ್ಣುಗಳು, ದ್ವಿದಳ ಧಾನ್ಯಗಳು, ಬೀಜಗಳನ್ನು ಹೆಚ್ಚಾಗಿ ಸೇವಿಸಿ.