ಬೆಂಗಳೂರು: ಗಡಿಭಾಗದ ಜಿಲ್ಲೆಗಳಲ್ಲಿ 108 ಆಂಬುಲೆನ್ಸ್ ಸೇವೆ ನಿಯಮಾವಳಿ ರೂಪಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿಯ ಡಾ. ಭರತ್ ಶೆಟ್ಟಿ ಅವರು ವಿಷಯ ಪ್ರಸ್ತಾಪಿಸಿ, ಆಂಬುಲೆನ್ಸ್ ಗಳು ಜಿಲ್ಲಾ ಗಡಿ ದಾಟಬಾರದು ಎಂದು ಹೇಳುತ್ತಿದ್ದು, ತಮ್ಮ ಕ್ಷೇತ್ರದಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟ ವೇಳೆ ಶವ ಸಾಗಿಸಲು ದಕ್ಷಿಣ ಕನ್ನಡದಿಂದ ಉಡುಪಿ ಜಿಲ್ಲೆ ಗಡಿಭಾಗದಲ್ಲಿ ಆಂಬುಲೆನ್ಸ್ ಬದಲಾವಣೆ ಮಾಡಲಾಯಿತು ಎಂದು ಗಮನ ಸೆಳೆದಿದ್ದಾರೆ.
ಇದಕ್ಕೆ ದನಿಗೂಡಿಸಿದ ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್ ಪ್ರಯಾಣ ಮಿತಿಯನ್ನು 80 ಕಿಲೋಮೀಟರ್ ಗೆ ಸೀಮಿತಗೊಳಿಸಿದ್ದು, ತುರ್ತು ಸಂದರ್ಭದಲ್ಲಿ ವಿನಾಯಿತಿ ನೀಡಲು ಮಾರ್ಗಸೂಚಿ ರೂಪಿಸುವಂತೆ ಸಲಹೆ ನೀಡಿದ್ದಾರೆ.
ಸಚಿವ ದಿನೇಶ್ ಗುಂಡೂರಾವ್ ಅವರು ಪ್ರತಿಕ್ರಿಯೆ ನೀಡಿ, ಗಡಿ ಭಾಗದಲ್ಲಿ 108 ಆಂಬುಲೆನ್ಸ್ ಸೇವೆಗೆ ನಿಯಮಾವಳಿ ರೂಪಿಸಲಾಗುವುದು ಎಂದು ತಿಳಿಸಿದ್ದಾರೆ.