ಬೆಂಗಳೂರು: ರಾಜ್ಯದಲ್ಲಿ ಝೀಕಾ ವೈರಾಣು ಇದುವರೆಗೆ ಯಾವುದೇ ವ್ಯಕ್ತಿಯಲ್ಲಿ ಪತ್ತೆಯಾಗಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಸೊಳ್ಳೆಗಳಲ್ಲಿ ಮಾತ್ರ ವೈರಾಣು ದೃಡಪಟ್ಟಿದ್ದು ಆತಂಕ ಪಡುವ ಅಗತ್ಯವಿಲ್ಲ ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಸೊಳ್ಳೆಗಳಲ್ಲಿ ಝೀಕಾ ವೈರಸ್ ಇರುವ ಬಗ್ಗೆ 10 ದಿನಗಳ ಹಿಂದೆಯೇ ಪ್ರಯೋಗಾಲಯ ವರದಿ ಬಂದಿದೆ. ಆ ಭಾಗದಲ್ಲಿ ಜ್ವರ ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದವರ ಮಾದರಿಯನ್ನು ಎನ್‌ಐವಿ ಪ್ರಯೋಗಾಲಯಕ್ಕೆ ಕಳುಹಿಸಿದ್ದು, ಮೂರು ದಿನಗಳಲ್ಲಿ ವರದಿ ಬರುವ ಸಾಧ್ಯತೆ ಇದೆ. ವೈರಾಣು ತಡೆಗೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆ, ಸ್ಥಳೀಯ ಸಂಸ್ಥೆಗಳಿಂದ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.