ಬೆಂಗಳೂರು: ಕಳೆದ ಮೂರು ತಿಂಗಳಿನಿಂದ ವೇತನ ನೀಡದ ಕಾರಣ ಆರೋಗ್ಯ ಕವಚ 108 ಆಂಬುಲೆನ್ಸ್ ಸಿಬ್ಬಂದಿ ಮುಷ್ಕರಕ್ಕೆ ಸಜ್ಜಾಗಿದ್ದಾರೆ. ಮೇ 6ರ ರಾತ್ರಿ 8 ಗಂಟೆಯಿಂದ ರಾಜ್ಯವ್ಯಾಪಿ ಆಂಬುಲೆನ್ಸ್ ಸೇವೆಗಳನ್ನು ಬಂದ್ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಮುಷ್ಕರ ಕೈಬಿಡುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ ಮಾಡಿದ್ದಾರೆ. ವೇತನ ನೀಡುವಲ್ಲಿ ಸಣ್ಣ ಸಮಸ್ಯೆಯಾಗಿತ್ತು. ಸಂಬಳ ಕೊರತೆ ಮಾಡಿಲ್ಲ. ಇದು ಚುನಾವಣೆ ಸಮಯವಾಗಿದ್ದು ಬದಲಾವಣೆ ಮಾಡುವುದಕ್ಕೆ ಆಗುವುದಿಲ್ಲ ಎಂದು ಹೇಳಿದ್ದಾರೆ.
ಚುನಾವಣಾ ನೀತಿ ಸಂಹಿತೆ ಇರುವುದರಿಂದ ಸಿಬ್ಬಂದಿ ಮುಷ್ಕರ ಕೈ ಬಿಡಿ ಎಂದು 108 ಆಂಬುಲೆನ್ಸ್ ಚಾಲಕರಿಗೆ ಸಚಿವ ದಿನೇಶ್ ಗುಂಡೂರಾವ್ ಮನವಿ ಮಾಡಿದ್ದಾರೆ. ಮುಷ್ಕರ ಕೈ ಬಿಡದಿದ್ದರೆ ಪರ್ಯಾಯ ಕ್ರಮಕ್ಕೆ ಮುಂದಾಗುತ್ತೇವೆ. ನಮ್ಮ ಬಳಿ ಬೇರೆ ಚಾಲಕರಿದ್ದಾರೆ. ಅವರನ್ನು ಸೇವೆಗೆ ಬಳಸಿಕೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
ಅಂಬುಲೆನ್ಸ್ ಚಾಲಕರಿಗೆ ವೇತನ ನೀಡಲು ಹಣದ ಕೊರತೆ ಇಲ್ಲ. ಸಂಪೂರ್ಣ ಹಣ ನೀಡಲಾಗಿದೆ. ವೇತನ ನೀಡುವಲ್ಲಿ ಸಣ್ಣ ಸಮಸ್ಯೆಯಾಗಿತ್ತು. ಸಂಬಳದ ಕೊರತೆ ಮಾಡಿಲ್ಲ ಎಂದು ಹೇಳಿದ್ದಾರೆ.