ಬೆಳಗಾವಿ: ನಿಯಮ ಉಲ್ಲಂಘನೆ ಮಾಡಿ ಡ್ರಗ್ಸ್ ಮಾರಾಟ ಮಡುತ್ತಿದ್ದ 292 ಫಾರ್ಮಸಿಗಳ ಪರವಾನಿಗೆ ರದ್ದು ಮಾಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ನಿಯಮಾವಳಿ ಉಲ್ಲಂಘನೆ, ಮಾದಕ ದ್ರವ್ಯಗಳ ಅಕ್ರಮ ಮಾರಾಟ ಹಾಗೂ ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿರುವ ಫಾರ್ಮಸಿಗಳ ಪರಿಶೀಲನೆಗೆ ಆರೋಗ್ಯ ಸಚಿವರು ಸೂಚನೆ ನೀಡಿದ್ದ ಹಿನ್ನೆಲೆಯಲ್ಲಿ ತಪಾಸಣೆ ವೇಳೆ ಅಕ್ರಮ ಎಸಗಿರುವುದು ಪತ್ತೆಯಾಗಿದೆ.
ಈ ಹಿನ್ನೆಲೆಯಲ್ಲಿ 292 ಫರಮಸಿಗಳ ಪರವಾನಿಗೆ ರದ್ದುಪಡಿಸಲಾಗಿದೆ. 1245 ಫಾರ್ಮಸಿಗಳ ಪರವಾನಿಗೆಯನ್ನು ಸಸ್ಪೆಂಡ್ ಮಾಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಈಗಾಗಲೇ 20 ಫಾರ್ಮಸಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದ್ದು, 6 ಕಂಪನಿಗಳಿಗೆ ಶಿಕ್ಷೆ ಪ್ರಕಟಿಸಲಾಗಿದೆ ಎಂದು ವಿಧಾನಪರಿಷತ್ ನಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ತಿಳಿಸಿದ್ದಾರೆ.