ಬೆಂಗಳೂರು: ರಾಜ್ಯದಲ್ಲಿ ಸಾರ್ವಜನಿಕ ಸಾರಿಗೆ ಸಿಬ್ಬಂದಿ ಕಣ್ಣಿನ ಆರೈಕೆಗಾಗಿ ಆಶಾಕಿರಣ ಯೋಜನೆ ಜಾರಿಗೊಳಿಸಲಾಗಿದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಬುಧವಾರ ವಿಧಾನಸೌಧದಲ್ಲಿ ರಾಜ್ಯ ಸರ್ಕಾರದ ಸಮಗ್ರ ನೇತ್ರ ಆರೈಕೆ ಆಶಾಕಿರಣ ಯೋಜನೆ, ಸಿ – ಕ್ಯಾಂಪ್, ಆಕ್ಟ್ ಫಾರ್ ಹೆಲ್ತ್ ಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಂಡ ಬಳಿಕ ಅವರು ಮಾತನಾಡಿ, ಸಾರಿಗೆ ಸಿಬ್ಬಂದಿಯ ಕಣ್ಣಿನ ಆರೋಗ್ಯದ ಬಗ್ಗೆ ನಿಗಾ ವಹಿಸಲಾಗುವುದು. ನಿರಂತರ ತಪಾಸಣೆಗಳ ಮೂಲಕ ಕಣ್ಣಿನ ತೊಂದರೆಗಳನ್ನು ಪತ್ತೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ಬಸ್ ಡಿಪೋಗಳಿಗೆ ತೆರಳಿ ನೇತ್ರ ತಪಾಸಣೆ ನಡೆಸಿ ಅಗತ್ಯ ಇರುವವರಿಗೆ ಶಸ್ತ್ರಚಿಕಿತ್ಸೆ ನೆರವೇರಿಸಲಾಗುವುದು. ಉಚಿತ ಕನ್ನಡಕ ವಿತರಿಸಲಾಗುವುದು. ಸಾರಿಗೆ ಸಿಬ್ಬಂದಿ ಕಣ್ಣಿನ ಆರೋಗ್ಯ ಉತ್ತಮವಾಗಿದ್ದಲ್ಲಿ ಬಸ್ ಗಳಲ್ಲಿ ಪ್ರತಿದಿನ ಪ್ರಯಾಣಿಸುವ 1.10 ಕೋಟಿ ಪ್ರಯಾಣಿಕರ ಸುರಕ್ಷತೆಗೆ ಅನುಕೂಲವಾಗುತ್ತದೆ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.