
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಗೃಹ ಆರೋಗ್ಯ ಯೋಜನೆಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.
ಗ್ರಾಮೀಣ ಪ್ರದೇಶದಲ್ಲಿ ಮನೆಗಳಿಗೆ ತೆರಳಿ ವಿವಿಧ ರೋಗಗಳ ತಪಾಸಣೆ ನಡೆಸುವ ಗೃಹ ಆರೋಗ್ಯ ಯೋಜನೆಗೆ ವಿಧಾನಸೌಧ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸಿಎಂ ಚಾಲನೆ ನೀಡಲಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ಸಚಿವರು ಭಾಗವಹಿಸಲಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಸಮುದಾಯ ಆರೋಗ್ಯ ಅಧಿಕಾರಿಗಳು, ಪ್ರಾಥಮಿಕ ಸುರಕ್ಷಣಾಧಿಕಾರಿಗಳು ಸೇರಿದಂತೆ ಆಶಾ ಕಾರ್ಯಕರ್ತೆಯರು ಪ್ರತಿ ಮನೆಗೆ ಭೇಟಿ ನೀಡಿ 30 ವರ್ಷ ಮೇಲ್ಪಟ್ಟ ಜನರ ರಕ್ತದೊತ್ತಡ, ಮಧುಮೇಹ ತಪಾಸಣೆ ನಡೆಸಲಿದ್ದಾರೆ. ಮಂಗಳವಾರ, ಬುಧವಾರ, ಶುಕ್ರವಾರ ಮತ್ತು ಶನಿವಾರದಂದು ದಿನಕ್ಕೆ 15 ಮನೆಗಳಂತೆ ಭೇಟಿ ನೀಡಿ ತಪಾಸಣೆ ಕಾರ್ಯ ನಡೆಸಲಾಗುವುದು. ಬಾಯಿ ಕ್ಯಾನ್ಸರ್, ಮಹಿಳೆಯರ ಗರ್ಭಕಂಠ ಮತ್ತು ಸ್ತನ ಕ್ಯಾನ್ಸರ್ ಸೇರಿದಂತೆ ಸಹ ಭೇಟಿಯ ಸಂದರ್ಭದಲ್ಲಿ ಪರೀಕ್ಷಿಸಲಾಗುತ್ತದೆ. ಅಸಂಕ್ರಾಮಿಕ ರೋಗಗಳಿಂದ ದೂರವಿರಲು ಜೀವನ ಶೈಲಿ ಮಾರ್ಪಾಡು ಮಾಡಲು ಆರೋಗ್ಯ ಸಿಬ್ಬಂದಿ ಸಲಹೆ ನೀಡಲಿದ್ದಾರೆ. ರೋಗ ದೃಢಪಟ್ಟ ಪ್ರಕರಣಗಳಿಗೆ ಅಗತ್ಯ ಔಷದಿಗಳನ್ನು ಮಾತ್ರ ಪೆಟ್ಟಿಗೆ ಮೂಲಕ ಜನರ ಬಳಿಗೆ ಒದಗಿಸಲು ಯೋಜನೆಯಲ್ಲಿ ರೂಪುರೇಷೆ ಸಿದ್ಧಪಡಿಸಲಾಗಿದೆ. ಗ್ರಾಮೀಣ ಪ್ರದೇಶದ ಜನರ ಆರೋಗ್ಯ ರಕ್ಷಣೆ ವಿಚಾರದಲ್ಲಿ ಇದು ದೂರ ದೃಷ್ಟಿಯ ಯೋಜನೆಯಾಗಿದೆ ಎಂದು ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ ಎಂದು ತಿಳಿಸಿದ್ದಾರೆ.