
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಒಬ್ಬರೇ ಕೆಪಿಸಿಸಿ ಅಧ್ಯಕ್ಷರ ಸ್ಥಾನದಲ್ಲಿ ಕೂರಲು ಸಾಧ್ಯವಿಲ್ಲ. ಬದಲಾವಣೆ ಎನ್ನುವುದು ಸಹಜ ಎಂದು ಹೇಳುವ ಮೂಲಕ ಆಹಾರ ಸಚಿವ ದಿನೇಶ್ ಗುಂಡೂರಾವ್ ಅಚ್ಚರಿ ಹೇಳಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಒಳ್ಳೆಯ ಕೆಲಸ ಮಾಡಿದ್ದಾರೆ. ಪಕ್ಷ ಸಂಘಟನೆ ಚೆನ್ನಾಗಿ ಮಾಡಿದ್ದಾರೆ. ಅದರಲ್ಲಿ ಯಾವುದೇ ಅನುಮಾನವಿಲ್ಲ. ಅಧ್ಯಕ್ಷರ ಬದಲಾವಣೆ ಬಗ್ಗೆ ಯಾವುದೇ ಗೊಂದಲಗಳಿಲ್ಲ. ಹೈಕಮಂಡ್ ದುಡುಕಿನ ನಿರ್ಧಾರ ಕೈಗೊಳ್ಳಲ್ಲ ಎಂದು ಹೇಳಿದರು.
ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ಒಬ್ಬರೇ ಕೂರಲು ಸಾಧ್ಯವಿಲ್ಲ. ಬದಲಾವಣೆ ಅನ್ನುವುದು ಸಹಜವಾಗಿ ನಡೆಯುತ್ತಿರುತ್ತದೆ. ಕಾಲಕಾಲಕ್ಕೆ ಬದಲಾವಣೆಗಳು ಆಗುತ್ತಿರುತ್ತವೆ. ಹೈಕಮಂಡ್ ನಿರ್ಧಾರವೇ ಅಂತಿಮ ಎಂದು ಹೇಳಿದರು.