ಬೆಂಗಳೂರು: ಸಚಿವ ದಿನೇಶ್ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನ ಇದೆ ಎಂಬ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಳ್ ಹೇಳಿಕೆಗೆ ದಿನೇಶ್ ಗುಂಡೂರಾವ್ ತಿರುಗೇಟು ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ಯತ್ನಾಳ್ ವಿಕೃತ ಮನಸ್ಥಿತಿಯವರು. ಅವರಿಗೆ ನಾಲಿಗೆ ಮೇಲೆ ಹಿಡಿತವಿಲ್ಲ. ಬಿಜೆಪಿಯಲ್ಲಿ ಇಂತವರ ಸಂಖ್ಯೆಯೇ ಹೆಚ್ಚಿದೆ ಎಂದು ಕಿಡಿಕಾರಿದ್ದಾರೆ.
ದ್ವೇಷ ಹೆಚ್ಚಿಸುವುದೇ ಬಿಜೆಪಿ ಶಾಸಕ ಯತ್ನಾಳ್ ಕೆಲಸ. ಹಾಗಾಗಿಯೇ ನನ್ನ ಪತ್ನಿ ಯತ್ನಾಳ್ ವಿರುದ್ಧ ದೂರು ಕೊಟ್ಟಿದ್ದರಾರೆ ಎಂದು ಹೇಳಿದ್ದಾರೆ.