alex Certify ರಮೇಶ್ ಜಾರಕಿಹೊಳಿ ವಿರುದ್ಧ ದೂರು ನೀಡಿದ ದಿನೇಶ್ ಕಲ್ಲಹಳ್ಳಿಗೆ ಬುಲಾವ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಮೇಶ್ ಜಾರಕಿಹೊಳಿ ವಿರುದ್ಧ ದೂರು ನೀಡಿದ ದಿನೇಶ್ ಕಲ್ಲಹಳ್ಳಿಗೆ ಬುಲಾವ್

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಸಿಡಿ ಬಿಡುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ದೂರುದಾರ ದಿನೇಶ್ ಕಲ್ಲಹಳ್ಳಿ ಅವರಿಗೆ ವಿಚಾರಣೆಗೆ ಹಾಜರಾಗಲು ಪೊಲೀಸರು ಸೂಚನೆ ನೀಡಿದ್ದಾರೆ.

ಲೈಂಗಿಕ ದೌರ್ಜನ್ಯ ಮತ್ತು ಜೀವ ಬೆದರಿಕೆ ಆರೋಪದಡಿ ದಿನೇಶ್ ಕಲ್ಲಹಳ್ಳಿ ದೂರು ನೀಡಿದ್ದು, ಪೊಲೀಸರು ಪ್ರಾಥಮಿಕ ತನಿಖೆ ಆರಂಭಿಸಿ ಕೆಲವು ಮಾಹಿತಿ ಕಲೆಹಾಕಿದ್ದಾರೆ. ಇದಾದ ನಂತರದಲ್ಲಿ ದಿನೇಶ್ ಕಲ್ಲಹಳ್ಳಿ ದೂರು ಹಿಂಪಡೆಯುವುದಾಗಿ ಕಬ್ಬನ್ ಪಾರ್ಕ್ ಪೊಲೀಸರಿಗೆ ಪತ್ರ ಬರೆದಿದ್ದಾರೆ.

ಮೊದಲಿಗೆ ವಕೀಲರ ಮೂಲಕ ದೂರು ವಾಪಸ್ ಪಡೆಯಲು ಮುಂದಾಗಿದ್ದ ಅವರು ನಂತರ ತಾವೇ ಠಾಣೆಗೆ ತೆರಳಿ ದೂರು ವಾಪಸ್ ಪಡೆಯುವುದಾಗಿ ಹೇಳಿದ್ದಾರೆ. ಅವರಿಗೆ ಮತ್ತೊಮ್ಮೆ ವಿಚಾರಣೆಗೆ ಹಾಜರಾಗಲು ಪೊಲೀಸರು ತಿಳಿಸಿದ್ದು, ಬುಧವಾರ ಬೆಳಗ್ಗೆ ಠಾಣೆಗೆ ಬರುವಂತೆ ಸೂಚನೆ ನೀಡಿದ್ದಾರೆ.

ದೂರು ಹಿಂಪಡೆಯಲು ಸದ್ಯಕ್ಕೆ ಅವಕಾಶವಿಲ್ಲ. ದೂರಿನ ಕುರಿತಾದ ಮಾಹಿತಿ ಕಲೆಹಾಕಲು ವಿಚಾರಣೆ ಅಗತ್ಯವಿದ್ದು, ಬುಧವಾರ ಠಾಣೆಗೆ ಬರುವಂತೆ ದಿನೇಶ್ ಕಲ್ಲಹಳ್ಳಿಗೆ ತಿಳಿಸಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...