ಬೆಂಗಳೂರು: ಬಿಜೆಪಿ ವರಿಷ್ಠರು ತಪ್ಪು ನಿರ್ಧಾರ ಕೈಗೊಂಡಿದ್ದಾರೆ. ಯಡಿಯೂರಪ್ಪನವರಿಗೆ ಬ್ಲಾಕ್ಮೇಲ್ ಮಾಡಲಾಗಿದೆ ಎಂದು ಬಾಲೆಹೊಸೂರಿನ ದಿಂಗಾಲೇಶ್ವರ ಶ್ರೀಗಳು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮುಂದಿನ ಎರಡು ವರ್ಷಗಳ ಕಾಲ ಯಡಿಯೂರಪ್ಪನವರನ್ನು ಮುಖ್ಯಮಂತ್ರಿಯಾಗಿ ಮುಂದುವರೆಸಬೇಕು. ಇಲ್ಲದಿದ್ದರೆ ಯಡಿಯೂರಪ್ಪನವರ ಕಣ್ಣೀರಿನಲ್ಲಿ ಬಿಜೆಪಿ ಕೊಚ್ಚಿ ಹೋಗಲಿದೆ ಎಂದು ಹೇಳಿದ್ದಾರೆ.
ಮಠಾಧೀಶರೆಲ್ಲ ಚರ್ಚೆ ನಡೆಸಿ ಒಂದು ನಿರ್ಧಾರಕ್ಕೆ ಬಂದಿದ್ದೇವೆ. ಯಡಿಯೂರಪ್ಪ ಕಣ್ಣೀರು ಹಾಕಿದ್ದನ್ನು ಸವಾಲಾಗಿ ಸ್ವೀಕರಿಸಿದ್ದೇವೆ. ನಾವು ಮಠಾಧೀಶರು ಸವಾಲಾಗಿ ಸ್ವೀಕರಿಸಿದ್ದು, ಇದು ಯಡಿಯೂರಪ್ಪನವರ ಕಣ್ಣೀರಲ್ಲ ಕರುನಾಡಿನ ಕಣ್ಣೀರು. ಯಡಿಯೂರಪ್ಪನವರ ಕಣ್ಣೀರಿನಲ್ಲಿ ಬಿಜೆಪಿ ತೇಲಿ ಹೋಗುತ್ತದೆ. ಪಕ್ಷವನ್ನು ಕಟ್ಟಿ ಬೆಳೆಸಲು ಆಗದಷ್ಟು ಕೆಟ್ಟ ಪರಿಸ್ಥಿತಿ ಬರಲಿದೆ ಎಂದು ದಿಂಗಾಲೇಶ್ವರ ಸ್ವಾಮೀಜಿ ಹೇಳಿದ್ದಾರೆ.