ಬೆಂಗಳೂರು : ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಮುಖಾಂತರ ಸರ್ಕಾರದ ಮಹತ್ತರ ಖಾತರಿ ಯೋಜನೆಯಾದ “ಯುವನಿಧಿ” ಯೋಜನೆಯನ್ನು ಡಿಸೆಂಬರ್ 26 ರಂದು ಚಾಲನೆ ನೀಡಲಾಗಿದೆ.
2023 ರಲ್ಲಿ ಪದವಿ/ ಡಿಪ್ಲೋಮಾ ಉತ್ತೀರ್ಣರಾಗಿ 6 ತಿಂಗಳಾದರೂ ಸರ್ಕಾರಿ/ಖಾಸಗಿ/ಸ್ವಯಂ ಉದ್ಯೋಗ ಹೊಂದಿಲ್ಲದವರು ಮತ್ತು ಉನ್ನತ ವಿದ್ಯಾಭ್ಯಾಸ ಮುಂದುವರೆಸದೆ ಇರುವ ವಿದ್ಯಾರ್ಥಿಗಳು ಕರ್ನಾಟಕ ಒನ್, ಗ್ರಾಮಒನ್, ಮತ್ತು ಬಾಪೂಜಿ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ http://sevasindhugs.karnataka.gov.in ಪೋರ್ಟಲ್ ಮೂಲಕ ಉಚಿತವಾಗಿ ʻಯುವನಿಧಿ” ಯೋಜನೆಗೆ ಅರ್ಜಿ ಸಲ್ಲಿಸಬಹುದು. ಪದವೀಧರರಿಗೆ ಪ್ರತಿ ತಿಂಗಳು 3 ಸಾವಿರ ರೂ.ಗಳು ಹಾಗೂ ಡಿಪ್ಲೋಮಾ ಪದವೀಧರರಿಗೆ 1,500 ರೂ.ಗಳನ್ನು ನಿರುದ್ಯೋಗ ಭತ್ಯೆಯನ್ನಾಗಿ ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ 2 ವರ್ಷಗಳವರೆಗೆ ನೀಡಲಾಗುತ್ತದೆ.