alex Certify ಡಿಪ್ಲೋಮಾ, ಪದವೀಧರರೇ ಗಮನಿಸಿ : ʻಯುವನಿಧಿʼ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿಯ ವೀಡಿಯೋ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಡಿಪ್ಲೋಮಾ, ಪದವೀಧರರೇ ಗಮನಿಸಿ : ʻಯುವನಿಧಿʼ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿಯ ವೀಡಿಯೋ

ಬೆಂಗಳೂರು :  ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲೊಂದಾದ ಯುವನಿಧಿ ಯೋಜನೆಯಡಿ ನೋಂದಣಿ ಮಾಡಿಕೊಳ್ಳಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಈ ಯೋಜನೆಯಡಿ ಪದವಿ ಪಾಸಾದವರಿಗೆ ರೂ.3000 ಮತ್ತು ಡಿಪ್ಲೋಮಾ ಪಾಸಾದವರಿಗೆ ರೂ.1500ಗಳನ್ನು ನೀಡಲಾಗುತ್ತದೆ. ಅರ್ಹರು ಸೇವಾ ಸಿಂಧು ಪೋರ್ಟಲ್, ಅಟಲ್ ಜೀ ಕೇಂದ್ರ, ಕರ್ನಾಟಕ-1 ಮತ್ತು ಇತರೆ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಿ ನೋಂದಣಿ ಮಾಡಿಸಿಕೊಳ್ಳಬಹುದು.

2023ರಲ್ಲಿ ಪದವಿ, ಡಿಪ್ಲೋಮಾ ಉತ್ತೀರ್ಣರಾದ ವಿದ್ಯಾರ್ಥಿಗಳು ಅರ್ಹರಾಗಿರುತ್ತಾರೆ. ಪದವಿ, ಡಿಪ್ಲೋಮಾ ನಂತರ ಕನಿಷ್ಠ 6 ತಿಂಗಳ ಅವಧಿಯವರೆಗೆ ಸರ್ಕಾರಿ, ಖಾಸಗಿ ಉದ್ಯೋಗ ಹೊಂದಿಲ್ಲದವರಾಗಿರಬೇಕು. ಸ್ವಯಂ ಉದ್ಯೋಗ ಹೊಂದಿರಬಾರದು. ಉನ್ನತ ವಿದ್ಯಾಭ್ಯಾಸ ಮುಂದುವರಿಸದೇ ಇರುವವರು ಅರ್ಹರು. ಕರ್ನಾಟಕದಲ್ಲಿ ವಾಸವಿರುವವರು (ಕನಿಷ್ಠ 6 ವರ್ಷಗಳವರೆಗೆ ಪದವಿ, ಡಿಪ್ಲೋಮಾದವರೆಗೆ ಅಧ್ಯಯನ ಮಾಡಿದವರು).

ನೀವೂ 2023 ರಲ್ಲಿ ಪದವೀಧರರಾಗಿದ್ದು, ಉದ್ಯೋಗದ ಹುಡುಕಾಟ ನಡೆಸುತ್ತಿದ್ದೀರಾ? ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ ಎಂಬ ಮಾಹಿತಿ ಇಲ್ಲವೇ? ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆ ಏನು? ಪ್ರಕ್ರಿಯೆ ಹೇಗೆ? ಯಾವೆಲ್ಲ ದಾಖಲೆಗಳು ಬೇಕು? ಎಂಬ ಪೂರ್ಣ ಮಾಹಿತಿ ಈ ವೀಡಿಯೋದಲ್ಲಿದೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...