alex Certify ಡಿಪ್ಲೋಮಾ, ಪದವೀಧರರೇ ಗಮನಿಸಿ : ಈ ತಪ್ಪು ಮಾಡಿದ್ರೆ ʻಯುವನಿಧಿʼ ಹಣ ಬರಲ್ಲ! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಡಿಪ್ಲೋಮಾ, ಪದವೀಧರರೇ ಗಮನಿಸಿ : ಈ ತಪ್ಪು ಮಾಡಿದ್ರೆ ʻಯುವನಿಧಿʼ ಹಣ ಬರಲ್ಲ!

ಬೆಂಗಳೂರು : ರಾಜ್ಯ ಸರ್ಕಾರದ ಐದನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆ ನೋಂದಣಿಗೆ ಚಾಲನೆ ನೀಡಲಾಗಿದ್ದು, ಅರ್ಹ ಡಿಪ್ಲೋಮಾ, ಪದವೀಧರರು ಯೋಜನೆಗೆ ಅರ್ಜಿ ಸಲ್ಲಿಸಬಹುದು.

2023 ನೇ ವರ್ಷದಲ್ಲಿ ತೇರ್ಗಡೆಯಾಗಿ, ತೇರ್ಗಡೆಯಾದ ದಿನಾಂಕದಿಂದ 180 ದಿನಗಳು ಕಳೆದರೂ ಉದ್ಯೋಗ ಲಭಿಸದ ಪದವೀಧರ ನಿರುದ್ಯೋಗಿಗಳಿಗೆ (ವೃತ್ತಿಪರ ಕೋರ್ಸ್ ಸೇರಿದಂತೆ) ಪ್ರತೀ ತಿಂಗಳು 3 ಸಾವಿರ ರೂ. ಹಾಗೂ ಡಿಪ್ಲೋಮಾ ಪಾಸಾದ ನಿರುದ್ಯೋಗಿಗಳಿಗೆ ಪ್ರತೀ ತಿಂಗಳು 1500 ರೂ. ನಿರುದ್ಯೋಗ ಭತ್ಯೆಯನ್ನು ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ 2 ವರ್ಷಗಳ ಅವಧಿಗೆ ಯುವನಿಧಿ ಯೋಜನೆಯಡಿ ನಿರುದ್ಯೋಗ ಭತ್ಯೆ ದೊರೆಯಲಿದೆ.

ಪದವಿ/ ಡಿಪ್ಲೋಮಾ ಮುಗಿಸಿ 6 ತಿಂಗಳಾದರೂ ಉದ್ಯೋಗ ಲಭಿಸದೇ ಇರುವ ಕನ್ನಡಿಗರಿಗೆ ಮಾತ್ರ ಈ ಯೋಜನೆಯು ಅನ್ವಯವಾಗುತ್ತದೆ. ಈ ಸೌಲಭ್ಯವು ಎರಡು ವರ್ಷಗಳ ಅವಧಿಗೆ ಮಾತ್ರ ಅನ್ವಯಿಸುತ್ತದೆ. ಎರಡು ವರ್ಷಗಳ ಅವಧಿಯೊಳಗೆ ಉದ್ಯೋಗ ದೊರೆತಲ್ಲಿ ಫಲಾನುಭವಿಗೆ ಈ ಯೋಜನೆಯ ಸೌಲಭ್ಯವನ್ನು ಸ್ಥಗಿತಗೊಳ್ಳಲಿದೆ. ಭತ್ಯೆಯನ್ನು ಡಿಬಿಟಿ ಮೂಲಕ ಒದಗಿಸಲು ಉದ್ದೇಶಿಸಲಾಗಿದ್ದು, ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸುವುದು. ನಿರುದ್ಯೋಗ ಸ್ಥಿತಿಯ ಬಗ್ಗೆ ಸ್ವತಂತ್ರ ಪರಿಶೀಲನೆ ಇರಬೇಕು.

ಉನ್ನತ ವ್ಯಾಸಂಗಕ್ಕೆ ದಾಖಲಾತಿ ಹೊಂದಿ ವಿದ್ಯಾಭ್ಯಾಸ ಮುಂದುವರೆಸುವವರು, ಶಿಶಿಕ್ಷು ವೇತನವನ್ನು ಪಡೆಯುತ್ತಿರುವವರು, ಸರ್ಕಾರಿ/ ಖಾಸಗಿ ವಲಯದಲ್ಲಿ ಉದ್ಯೋಗ ಪಡೆದಿರುವವರು. ರಾಜ್ಯ ಮತ್ತು ಕೇಂದ್ರದ ವಿವಿಧ ಯೋಜನೆಯಡಿ ಹಾಗೂ ಬ್ಯಾಂಕ್‍ಗಳಲ್ಲಿ ಸಾಲ ಪಡೆದು ಸ್ವಯಂ ಉದ್ಯೋಗ ಹೊಂದಿದವರು ಈ ಯೋಜನೆಗೆ ಅರ್ಹರಾಗಿರುವುದಿಲ್ಲ.

ಫಲಾನುಭವಿಗಳಿಗೆ 2 ವರ್ಷ ಅವಧಿಯೊಳಗೆ ಉದ್ಯೋಗ ದೊರೆತಲ್ಲಿ ಫಲಾನುಭವಿಗೆ ಈ ಯೋಜನೆಯ ಸೌಲಭ್ಯವನ್ನು ಸ್ಥಗಿತಗೊಳಿಸಲಾಗುತ್ತದೆ. ಈ ಯೋಜನೆಗೆ ಉನ್ನತ ವ್ಯಾಸಂಗಕ್ಕೆ ದಾಖಲಾಗಿರುವವರು, ಶಿಶಿಕ್ಷು ವೇತನವನ್ನು ಪಡೆಯುತ್ತಿರುವವರು ಸರ್ಕಾರಿ/ ಖಾಸಗಿ ವಲಯದಲ್ಲಿ ಉದ್ಯೋಗ ಪಡೆದವರು ಹಾಗೂ ರಾಜ್ಯ ಮತ್ತು ಕೇಂದ್ರದ ವಿವಿಧ ಯೋಜನೆಗಳಡಿ ಬ್ಯಾಂಕ್‍ಗಳಲ್ಲಿ ಸಾಲ ಪಡೆದು ಸ್ವಯಂ ಉದ್ಯೊಗ ಪಡೆದವರು ಅರ್ಹರಿರುವುದಿಲ್ಲ. ಸರ್ಕಾರಕ್ಕೆ ತಪ್ಪು ಮಾಹಿತಿ ನೀಡಿ ಸೌಲಭ್ಯದ ದುರುಪಯೋಗಪಡಿಸಿಕೊಂಡಲ್ಲಿ ಅಂತಹವರನ್ನು ಕಾನೂನು ಕ್ರಮಕ್ಕೆ ಶಿಫಾರಸ್ಸು ಮಾಡಲಾಗುವುದಲ್ಲದೆ ಹಣವನ್ನು ಬಡ್ಡಿಸಹಿತ ವಸೂಲಾತಿಗೆ ಕ್ರಮವಹಿಸಲಾಗುತ್ತದೆ.

ಯುವನಿಧಿ ಯೋಜನೆಯಡಿ ಹೆಸರು ನೋಂದಾಯಿಸಿಕೊಳ್ಳಲು ಸೇವಾ ಸಿಂಧು ಪೋರ್ಟಲ್ https://sevasindhugs.karnataka.gov.in  ಗೆ ಭೇಟಿ ನೀಡಬಹುದು. ಉಚಿತವಾಗಿ ಕರ್ನಾಟಕ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು. ಸಹಾಯವಾಣಿ ಸಂಖ್ಯೆ 18005999918 ಸಂಪರ್ಕಿಸಬಹುದು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...