ಬೆಂಗಳೂರು : ರಾಜ್ಯ ಸರ್ಕಾರದ ಐದನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಗೆ ಡಿಸೆಂಬರ್ 26 ರಿಂದ ನೋಂದಣಿ ಶುರುವಾಗಲಿದ್ದು, ಡಿಪ್ಲೋಮಾ, ಪದವೀಧರರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು. ಡಿ.26 ರಂದು ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಯುವನಿಧಿ ನೋಂದಣಿಗೆ ಚಾಲನೆ ನೀಡಲಿದ್ದಾರೆ.
ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ?
ಯುವನಿಧಿ ಯೋಜನೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ. ಇದಕ್ಕಾಗಿ ನೀವು ಸೇವಾಸಿಂಧು ಪೋರ್ಟಲ್ https://sevasindhu.karnataka.gov.inಗೆ ಬೇಟಿ ನೀಡಬೇಕಾಗುತ್ತದೆ. ಡಿಸೆಂಬರ್ 26 ರಿಂದ ಸೇವಾ ಸಿಂಧು ಪೋರ್ಟಲ್ ಮೂಲಕ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು.
ಯುವ ನಿಧಿ ನಿರುದ್ಯೋಗ ಭತ್ಯೆ ಯಾರಿಗೆ ಎಷ್ಟು?
ಪದವೀಧರರಿಗೆ ಪ್ರತಿ ತಿಂಗಳು 3000 ರೂಪಾಯಿ
ಡಿಪ್ಲೊಮೋ ಪದವೀಧರರಿಗೆ ಪ್ರತಿ ತಿಂಗಳು 1500 ರೂಪಾಯಿ
ಎಲ್ಲಿ ಅರ್ಜಿ ಸಲ್ಲಿಸಬಹುದು?
ಪತ್ರಿ ತಿಂಗಳು 25 ರೊಳಗೆ ಅರ್ಜಿ ಸಲ್ಲಿಸಲು ಅವಕಾಶ ಇದೆ. ಸೇವಾ ಸಿಂಧುವಿನಲ್ಲಿ ಅರ್ಜಿ ಸಲ್ಲಿಸಬಹುದು. ಕರ್ನಾಟಕ ಓನ್, ಬಾಪೂಜಿ ಸೇವಾ ಕೇಂದ್ರ, ಗ್ರಾಮ ಓನ್ ಕೇಂದ್ರಗಳಲ್ಲಿಯೂ ಅರ್ಜಿ ಸಲ್ಲಿಸಬಹುದು ಎಂದು ಸಚಿವರು ತಿಳಿಸಿದ್ದಾರೆ.
ಆರು ತಿಂಗಳವರೆಗೆ ಯಾವುದೇ ಕೆಲಸ ಸಿಗದಿದ್ದರೆ ಅಥವಾ ಅವರು ಎಲ್ಲಾದ್ರೂ ಸ್ವಉದ್ಯೋಗ ಕೈಗೊಳ್ಳದಿದ್ದರೆ, ಉನ್ನತ ಶಿಕ್ಷಣಕ್ಕೆ ಹೋಗದಿದ್ದರೆ ಯುವನಿಧಿ ಯೋಜನೆಗೆ ಅರ್ಹರು. ಯುವನಿಧಿ ಯೋಜನೆಯಡಿ ಡಿಪ್ಲೋಮಾ ಪದವಿ ಪಡೆದವರಿಗೆ 1,500 ರೂ. ಪದವೀಧರರಿಗೆ 3,000 ರೂ.ಗಳನ್ನು ನಿರುದ್ಯೋಗ ಭತ್ಯೆಯನ್ನು ಎರಡು ವರ್ಷಗಳವರೆಗೆ ನೀಡಲಾಗುತ್ತದೆ.
ಈ ದಾಖಲೆಗಳನ್ನು ರೆಡಿ ಇಟ್ಕೊಳ್ಳಿ
ಎಸ್ ಎಸ್ ಎಲ್ ಸಿ ಅಂಕ ಪಟ್ಟಿ
ಪಿಯುಸಿ ಅಂಕಪಟ್ಟಿ
ಸಿಇಟಿ ರಿಜಿಸ್ಟ್ರೇಶನ್
ರೇಷನ್ ಕಾರ್ಡ್
ಆಧಾರ್ ಕಾರ್ಡ್
ಆದಾಯ ಪ್ರಮಾಣ ಪತ್ರ
ಶಿಕ್ಷಣ ಸಂಸ್ಥೆಯಿಂದ ಪಡೆದ ಪ್ರಮಾಣ ಪತ್ರ ಹಾಗೂ ಅಂಕಪಟ್ಟಿ
ಬ್ಯಾಂಕ ಖಾತೆಯ ವಿವರ
ಇ-ಮೇಲ್ ಐಡಿ
ಮೊಬೈಲ್ ಸಂಖ್ಯೆ
ಭಾವಚಿತ್ರ