alex Certify ‘ಶೀಘ್ರವೇ ದೇವಸ್ಥಾನಗಳಲ್ಲಿ ಹಿರಿಯ ನಾಗರಿಕರಿಗೆ ನೇರ ದರ್ಶನ ವ್ಯವಸ್ಥೆ ಶುರು’ : ಸಚಿವ ರಾಮಲಿಂಗಾರೆಡ್ಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಶೀಘ್ರವೇ ದೇವಸ್ಥಾನಗಳಲ್ಲಿ ಹಿರಿಯ ನಾಗರಿಕರಿಗೆ ನೇರ ದರ್ಶನ ವ್ಯವಸ್ಥೆ ಶುರು’ : ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು : ಮುಜರಾಯಿ ಇಲಾಖೆಗೊಳಪಡುವ ಎಲ್ಲಾ ದೇವಸ್ಥಾನಗಳಲ್ಲಿ ಶೀಘ್ರವೇ ಹಿರಿಯ ನಾಗರಿಕರಿಗೆ ನೇರ ದರ್ಶನ ವ್ಯವಸ್ಥೆ ಶುರುವಾಗಲಿದೆ ಎಂದು ಸಾರಿಗೆ ಹಾಗೂ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ಬಸವನಗುಡಿ ದೊಡ್ಡ ಗಣಪತಿ ದೇವಸ್ಥಾನದಲ್ಲಿ ಶನಿವಾರ ಹಿರಿಯ ನಾಗರಿಕರಿಗೆ ಶೀಘ್ರ ದರ್ಶನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ನಂತರ ಮಾತನಾಡಿದರು. ಮುಜರಾಯಿ ಇಲಾಖೆಗೆ ಸೇರಿದ ದೇವಸ್ಥಾನಕ್ಕೆ ಬರುವ 65 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯ ನಾಗರಿಕರು ಸರತಿ ಸಾಲಿನಲ್ಲಿ ಕಾಯುವುದನ್ನು ತಪ್ಪಿಸಲು, ನೇರವಾಗಿ ದೇವರ ದರ್ಶನ ಮಾಡುವುದಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ ಎಂದು ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.
ದೇವಸ್ಥಾನಗಳಲ್ಲಿ ವಯಸ್ಸಾದವರು ಬಹಳ ಹೊತ್ತು ಕ್ಯೂ ನಿಂತು ಹೋಗಲು ಸಾಧ್ಯವಿಲ್ಲ, 65 ವರ್ಷ ಆದವರಿಗೆ ಬಹಳ ಹೊತ್ತು ನಿಲ್ಲಲು ಆಗಲ್ಲ . ಆದ್ದರಿಂದ ಹಿರಿಯ ನಾಗರಿಕರಿಗೆ ನೇರವಾಗಿ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.ದೇವಸ್ಥಾನಗಳಲ್ಲಿ ಶುದ್ದ ಕುಡಿಯುವ ನೀರು ಹಾಗೂ ಸುಸಜ್ಜಿತ ಶೌಚಾಲಯ ವ್ಯವಸ್ಥೆ ಕಲ್ಪಿಸುವಂತೆ ಸೂಚನೆ ನೀಡಿದ್ದೇನೆ ಎಂದು ಸಚಿವರು ಹೇಳಿದರು.

ಇತ್ತೀಚಿನ ದಿನಗಳಲ್ಲಿ ಇಲಾಖೆ ವ್ಯಾಪ್ತಿಗೆ ಒಳಪಡುವ ದೇವಾಲಯಗಳಿಗೆ ಆಗಮಿಸುತ್ತಿರುವ ಭಕ್ತಾಧಿಗಳ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದ್ದು, ಹಿರಿಯ ನಾಗರೀಕರಿಗೆ ದೇವರ ದರ್ಶನಕ್ಕೆ ಸರತಿ ಸಾಲಿನಲ್ಲಿ ನಿಂತುಕೊಳ್ಳುವುದು ಕಷ್ಟಕರವಾಗಿರುವುದರಿಂದ 65 ವರ್ಷ ಮೇಲ್ಪಟ್ಟವರಿಗೆ ಪ್ರತ್ಯೇಕ ಶೀಘ್ರು ದರ್ಶನಕ್ಕೆ ಅಗತ್ಯ ವ್ಯವಸ್ಥೆ ಮಾಡಲು, ಹಿರಿಯ ನಾಗರೀಕರು ಅವರ ವಯಸ್ಸಿನ ದಾಖಲೆ/ ಆಧಾರ ಕಾರ್ಡ್ ತೋರಿಸಿದಲ್ಲಿ ಅವರಿಗೆ ಶೀಘ್ರ ದರ್ಶನಕ್ಕೆ ಅನುಕೂಲವಾಗುವಂತೆ ವ್ಯವಸ್ಥೆಯನ್ನು ಕಲ್ಪಿಸಲು ಸೂಚಿಸಿದೆ. ದೇವಾಲಯದಲ್ಲಿ ಸ್ಮಳಾವಕಾಶ ಇದ್ದಲ್ಲಿ ಹಿರಿಯ ನಾಗರೀಕರಿಗೆಂದು ಪ್ರತ್ಯೇಕ ಸ್ಥಳ ಕಾಯ್ದಿರಿಸಲು ಸೂಚಿಸಲಾಗಿದೆ.ದೇವಾಲಯಗಳಲ್ಲಿ ಹಿರಿಯ ನಾಗರೀಕರ ಸಹಾಯ ಕೇಂದ್ರವನ್ನು ( Help desk) ಸ್ಥಾಪಿಸಿ, ಹಿರಿಯ ನಾಗರೀಕರಿಗೆ ಸಹಕರಿಸಿ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸುವುದು. ಸದರಿ ಸಹಾಯ ಕೇಂದ್ರಕ್ಕೆ ಜವಾಬ್ದಾರಿಯುತ ಸಿಬ್ಬಂದಿಗಳನ್ನು ನಿಯೋಜಿಸಿ ಹಿರಿಯ ನಾಗರೀಕರಿಗೆ ತ್ವರಿತ ದರ್ಶನ ಏರ್ಪಡಿಸಲು ಕ್ರಮ ಕೈಗೊಳ್ಳುವುದು ಎಂದು ಧಾರ್ಮಿಕ ದತ್ತಿ ಇಲಾಖೆ ಅಧಿಸೂಚನೆ ಹೊರಡಿಸಿದೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...