ಶಿವಮೊಗ್ಗ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಶಿವಮೊಗ್ಗ ಇವರ ಅಧೀನದ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಮತ್ತು ಸಾರ್ವಜನಿಕ ಆಸ್ಪತ್ರೆಗಳಲ್ಲಿ ಖಾಲಿ ಇರುವ ತಜ್ಞ ವೈದ್ಯರ ಹುದ್ದೆಗಳಿಗೆ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಲು ನೇರ ಸಂದರ್ಶನ ಏರ್ಪಡಿಸಲಾಗಿದೆ.
ಫಿಜಿಷಿಯನ್-02, ಶಸ್ತ್ರಚಿಕಿತ್ಸಾ ತಜ್ಞರು-1, ಸ್ತ್ರೀರೋಗ ತಜ್ಞ-3, ಅರಿವಳಿಕೆ-9, ಇಎನ್‌ಟಿ-2, ನೇತ್ರ ತಜ್ಞರು-2, ಮಕ್ಕಳ ತಜ್ಞರು-2, ಕೀಲು ಮತ್ತು ಮೂಳೆ ತಜ್ಞರು-1, ರೇಡಿಯಾಲಜಿಸ್ಟ್ -1, ನೆಫ್ರೊಲಜಿಸ್ಟ್-1 ಒಟ್ಟು 24 ತಜ್ಞ ವೈದ್ಯಾಧಿಕಾರಿಗಳ ಹುದ್ದೆಗಳಿಗೆ ಒಂದು ವರ್ಷ ಅವಧಿಗೆ ರೋಸ್ಟರ್ ಮತ್ತು ಮೆರಿಟ್ ಆಧಾರದಲ್ಲಿ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಲಾಗುವುದು.
ಆಸಕ್ತ ಅಭ್ಯರ್ಥಿಗಳು ದಿ: 15-01-2025 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆವರೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ, ಬಿ.ಹೆಚ್.ರಸ್ತೆ, ಶಿವಮೊಗ್ಗ ಇಲ್ಲಿ ತಮ್ಮ ವಿದ್ಯಾರ್ಹತೆ, ಹುಟ್ಟಿದ ದಿನಾಂಕ ಮತ್ತು ಮೀಸಲಾತಿಗೆ ಸಂಬಂಧಿಸಿದ ಎಲ್ಲಾ ದಾಖಲಾತಿಗಳ ಒಂದು ಸೆಟ್ ನಕಲು ಮತ್ತು ಮೂಲ ಪ್ರತಿಗಳು ಹಾಗೂ ಇತ್ತೀಚಿನ ಎರಡು ಭಾವಚಿತ್ರಗಳೊಂದಿಗೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗೆ ದೂ.ಸಂ: 08182 222382 ನ್ನು ಸಂಪರ್ಕಿಸಬಹುದೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.