alex Certify ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಇಲ್ಲಿದೆ ಗುಡ್ ನ್ಯೂಸ್: ಏಕಲವ್ಯ ಮಾದರಿ ಶಾಲೆಯಲ್ಲಿ ಅತಿಥಿ ಶಿಕ್ಷಕರು, ಇತರ ಹುದ್ದೆಗೆ ನೇಮಕಾತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಇಲ್ಲಿದೆ ಗುಡ್ ನ್ಯೂಸ್: ಏಕಲವ್ಯ ಮಾದರಿ ಶಾಲೆಯಲ್ಲಿ ಅತಿಥಿ ಶಿಕ್ಷಕರು, ಇತರ ಹುದ್ದೆಗೆ ನೇಮಕಾತಿ

ಚಿತ್ರದುರ್ಗ: ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು 2025-6 ನೇ ಸಾಲಿನ ಒಂದು ವರ್ಷದ ಅವಧಿಗೆ ಹಿರಿಯೂರು ತಾಲ್ಲೂಕು ದೇವರಕೊಟ್ಟದಲ್ಲಿನ ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ ಖಾಲಿ ಇರುವ ಗುತ್ತಿಗೆ ಆಧಾರದ ಮೇರೆಗೆ ಅತಿಥಿ ಶಿಕ್ಷಕರು ಮತ್ತು ಇತರೆ ಹುದ್ದೆಗಳಿಗೆ ನೇರ ಸಂದರ್ಶನವನ್ನು ಮಾ. 8 ರಂದು ದೇವರಕೊಟ್ಟದಲ್ಲಿನ ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ ಏರ್ಪಡಿಸಲಾಗಿದೆ.

ತರಬೇತಿ ಪಡೆದ ಪದವೀಧರ ಶಿಕ್ಷಕರ ಹುದ್ದೆಗಳಲ್ಲಿ ಇಂಗ್ಲೀಷ್, ಕನ್ನಡ, ಹಿಂದಿ, ಗಣಿತ, ವಿಜ್ಞಾನ, ಸಮಾಜ ವಿಜ್ಞಾನ, ಸಂಗೀತ, ಕ್ರೀಡಾ ತರಬೇತುದಾರ(ಹೆಣ್ಣು), ಕಲೆ. ಸ್ನಾತಕೋತ್ತರ ಪದವೀಧರ ಶಿಕ್ಷಕರ ಹುದ್ದೆಗಳಲ್ಲಿ ಇಂಗ್ಲೀಷ್, ಭೌತಶಾಸ್ತ್ರ, ಕನ್ನಡ, ಗಣಿತ, ರಸಾಯನ ಶಾಸ್ತ್ರ, ಜೀವಶಾಸ್ತ್ರ, ಅರ್ಥಶಾಸ್ತ್ರ, ಕಂಪ್ಯೂಟರ್ ವಿಜ್ಞಾನ ವಿಷಯಗಳ ಶಿಕ್ಷಕರು. ವಸತಿ ನಿಲಯ ಮೇಲ್ವಿಚಾರಕರು(ಮಹಿಳೆ) ಕೌನ್ಸಿಲರ್ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಲಾಗುತ್ತದೆ. ಪ್ರತಿ ವಿಷಯಕ್ಕೆ ಒಂದು ಹುದ್ದೆ ಮಾತ್ರ ಲಭ್ಯವಿರುತ್ತದೆ.

ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ವಸತಿ ಶಾಲೆಯಿಂದ ಪಡೆದು, ಭರ್ತಿ ಮಾಡಿದ ಅರ್ಜಿ ನಮೂನೆಯೊಂದಿಗೆ ಮೂಲ ಪ್ರಮಾಣ ಪತ್ರಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು. ಮತ್ತು ಪ್ರಮಾಣ ಪತ್ರಗಳ ಒಂದು ಸೆಟ್ ಸ್ವಯಂ ದೃಢೀಕರಿಸಿದ ಪ್ರತಿಗಳನ್ನು ಮತ್ತು ಒಂದು ಪಾಸ್‍ಪೋರ್ಟ್ ಭಾವಚಿತ್ರವನ್ನು ಮಾ. 6 ರಂದು ಅಥವಾ ಮೊದಲು ಸಲ್ಲಿಸಬೇಕು. ಅತಿಥಿ ಶಿಕ್ಷಕರಿಗೆ ಉಪನ್ಯಾಸ, ಅವಧಿ ಆಧಾರದಲ್ಲಿ ಪಾವತಿಸಲಾಗುವುದು. ಬೆಳಿಗ್ಗೆ 9 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ನೊಂದಣಿ ಮಾಡಿಕೊಳ್ಳಲಾಗುವುದು. ಹೆಚ್ಚಿನ ಮಾಹಿತಿಗೆ 9744109555 ಅಥವಾ 7892898796 ಕ್ಕೆ ಸಂಪರ್ಕಿಸಬಹುದು ಎಂದು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...