ಚಿತ್ರದುರ್ಗ: ಚಿತ್ರದುರ್ಗ ನಗರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಇದೇ ಆಗಸ್ಟ್ 23ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 3 ರವರೆಗೆ ನೇರ ನೇಮಕಾತಿ ಸಂದರ್ಶನ ಹಮ್ಮಿಕೊಳ್ಳಲಾಗಿದೆ.
ಮೇಳದಲ್ಲಿ ಖಾಸಗಿ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಲು ಪುರುಷ, ಮಹಿಳಾ ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆಮಾಡಿಕೊಳ್ಳಲಿವೆ.
ಎಸ್.ಎಸ್.ಎಲ್.ಸಿ, ಪಿಯುಸಿ, ಡಿಪ್ಲೊಮಾ, ಐಟಿಐ, ಯಾವುದೇ ಪದವಿ ಹೊಂದಿರುವ 18 ರಿಂದ 30 ವರ್ಷದೊಳಗಿರುವ ಅಭ್ಯರ್ಥಿಗಳು ಭಾಗವಹಿಸಬಹುದು. ಸಂದರ್ಶನಕ್ಕೆ ಆಗಮಿಸುವಾಗ 5 ಪ್ರತಿ ಬಯೋಡೇಟಾ, ವಿದ್ಯಾರ್ಹತೆ ಪ್ರಮಾಣ ಪತ್ರ ಹಾಗೂ ಪೋಟೋಗಳನ್ನು ತರಬೇಕು.
ಹೆಚ್ಚಿನ ಮಾಹಿತಿಗಾಗಿ ನಗರದ ಸ್ಟೇಡಿಯಂ ರಸ್ತೆ ತಿರುವಿನಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಕಚೇರಿಗೆ ಭೇಟಿ ನೀಡಬಹುದು. ಕಚೇರಿ ದೂರವಾಣಿ ಸಂಖ್ಯೆ 7022459064 8105619020, 9945587060 ಗೆ ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿ ತಿಳಿಸಿದ್ದಾರೆ.