ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆ ನಡೆಸಲಾಗಿದೆ.
ಅಬಕಾರಿ ಇಲಾಖೆಯಲ್ಲಿ ರಾಜಸ್ವ ಸಂಗ್ರಹ ಹೆಚ್ಚಿಸಲು ಜಾಗೃತ ದಳ ಇನ್ನಷ್ಟು ಚುರುಕಾಗಿ ಕಾರ್ಯನಿರ್ವಹಿಸಲು ಸಿಎಂ ಸೂಚನೆ ನೀಡಿದ್ದಾರೆ.
ಅಬಕಾರಿ ಇಲಾಖೆಯಲ್ಲಿ ಖಾಲಿಯಿರುವ ಗ್ರೂಪ್ ಸಿ ಹುದ್ದೆಗಳನ್ನು ತುಂಬಲು ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಿದ್ದಾರೆ.