
ಬೆಂಗಳೂರು: ನಟ, ನಿರ್ದೇಶಕ ನಾಗಶೇಖರ್ ಅವರ ಕಾರು ಅಪಘಾತಕ್ಕೀಡಾಗಿರುವ ಘಟನೆ ಬೆಂಗಳೂರಿನ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ನಡೆದಿದೆ.
ನಾಗಶೇಖರ್ ಪ್ರಯಾಣಿಸುತ್ತಿದ್ದ ಬೆಂಜ್ ಕಾರು ವೇಗವಾಗಿ ಬಂದು ಮರಕ್ಕೆ ಡಿಕ್ಕಿ ಹೊಡೆದಿದೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ನಾಗಶೇಖರ್ ಅವರ ಕಾರನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.