
ಬೆಂಗಳೂರು: ಅಲ್ಪಸಂಖ್ಯಾತರ ನಿರ್ದೇಶನಾಲಯದಿಂದ ಪ್ರಸಕ್ತ ವರ್ಷ ಪ್ರಾಥಮಿಕ ಹಂತದಿಂದ ಉನ್ನತ ಶಿಕ್ಷಣದವರೆಗೆ 7.85 ಲಕ್ಷ ವಿದ್ಯಾರ್ಥಿಗಳಿಗೆ 290 ಕೋಟಿ ರೂ. ವಿದ್ಯಾರ್ಥಿವೇತನ ನೀಡಲಾಗುತ್ತಿದೆ ಎಂದು ಅಲ್ಪಸಂಖ್ಯಾತ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ಅವರು ತಿಳಿಸಿದ್ದಾರೆ.
6.25 ಲಕ್ಷ ವಿದ್ಯಾರ್ಥಿಗಳಿಗೆ ಈಗಾಗಲೇ ಡಿಬಿಟಿ ಮೂಲಕ 180 ಕೋಟಿ ರೂ. ವರ್ಗಾವಣೆ ಮಾಡಲಾಗಿದೆ. 1.60 ಲಕ್ಷ ವಿದ್ಯಾರ್ಥಿಗಳಿಗೆ 100 ಕೋಟಿ ಅನುದಾನ ಅಗತ್ಯ ಇರುವ ಬಗ್ಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ವಿದ್ಯಾಸಿರಿ ಯೋಜನೆಯಡಿ 23 ಸಾವಿರ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಗಳಲ್ಲಿ ಪ್ರವೇಶ ನೀಡಲಾಗಿದ್ದು, ಹಾಸ್ಟೆಲ್ ಪ್ರವೇಶ ಸಿಗದ 5753 ವಿದ್ಯಾರ್ಥಿಗಳಿಗೆ ಮಾಸಿಕ 1500 ರೂಪಾಯಿಯಂತೆ ಹಣ ವರ್ಗಾವಣೆ ಮಾಡಲಾಗಿದೆ. ಆಧಾರ್ ಲಿಂಕ್ ಸಮಸ್ಯೆಯಿಂದ ಕೆಲವು ವಿದ್ಯಾರ್ಥಿಗಳ ಖಾತೆಗೆ ಹಣ ಜಮೆಯಾಗಿಲ್ಲ. ಸಮಸ್ಯೆ ಸರಿಯಾದ ನಂತರ ಅವರ ಖಾತೆಗೂ ಹಣ ಹಾಕಲಾಗುವುದು ಎಂದು ಹೇಳಿದ್ದಾರೆ.