ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ನಿರಾಸೆ : ಬಿಸಿಯೂಟಕ್ಕೆ `ರಾಗಿಮುದ್ದೆ, ಜೋಳದ ರೊಟ್ಟಿ’ಯ ಪ್ರಸ್ತಾಪ ತಿರಸ್ಕರಿಸಿದ ಕೇಂದ್ರ ಸರ್ಕಾರ!

ಬೆಂಗಳೂರು : ಬಿಸಿಯೂಟದ ಜೊತೆಗೆ ರಾಗಿಮುದ್ದೆ, ಜೋಳದ ರೊಟ್ಟಿಯ ನಿರೀಕ್ಷೆಯಲ್ಲಿದ್ದ ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ ನಿರಾಸೆ ಮೂಡಿಸಿದ್ದು, ರಾಜ್ಯ ಸರ್ಕಾರದ ಪ್ರಸ್ತಾವನೆಯನ್ನು ತಿರಸ್ಕರಿಸಿದೆ.

ರಾಜ್ಯದ 1 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ಬಿಸಿಯೂಟದ ಜೊತೆಗೆ ರಾಗಿ ಮುದ್ದೆ ಹಾಗೂ ಜೋಳದ ರೊಟ್ಟಿ ನೀಡಲು ಅಗತ್ಯವಿರುವ ಆಹಾರ ಧಾನ್ಯಗಳನ್ನು ನೀಡುವಂತೆ ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ.

ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಮಕ್ಕಳಿಗೆ ಪೌಷ್ಟಿಕಾಂಶಯುಕ್ತ ಆಹಾರ ಒದಗಿಸಲು ಸಿರಿಧಾನ್ಯ ಬಳಸುವಂತೆ ಕೇಂದ್ರ ಸರ್ಕಾರ ರಾಜ್ಯ ಸರ್ಕಾರಕ್ಕೆ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಬಿಸಿಯೂಟದ ಜೊತೆಗೆ ರಾಗಿಮುದ್ದೆ, ಜೋಳದ ರೊಟ್ಟಿ ನೀಡಲು ಆಹಾರಧಾನ್ಯ ಖರೀದಿಗೆ ಅನುದಾನ ಕೋರಿ ಪ್ರಧಾನಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ ವಿಭಾಗಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆದರೆ ಇಲಾಖೆ ಯಾವುದೇ ಕಾರಣ ನೀಡದೇ ಸಿರಿಧಾನ್ಯಗಳನ್ನು ಮಾತ್ರ ನೀಡಬೇಕು ಎಂದು ಸೂಚಿಸಿ ಶಿಕ್ಷಣ ಇಲಾಖೆಗೆ ಪತ್ರ ಬರೆದಿದೆ. ಈ ಮೂಲಕ ಬಿಸಿಯೂಟದಲ್ಲಿ ರಾಗಿಮುದ್ದೆ, ಜೋಳದ ರೊಟ್ಟಿ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ನಿರಾಸೆಯಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read