ಉಡುಪಿ: ಕರಾವಳಿ ಭಾಗದಲ್ಲಿ ಭಾರಿ ಮಳೆ ಮುಂದುವರೆದಿದೆ. ಭಾರಿ ಮಳೆಯ ಕಾರಣ ಗುಡ್ಡ ಕುಸಿದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಉಡುಪಿ ಕೊಲ್ಲೂರು ಗ್ರಾಮದ ಸೊಸೈಟಿ ಗುಡ್ಡೆ ಬಳಿ ನಡೆದಿದೆ.
ಅಂಬಾ(45) ಮೃತಪಟ್ಟ ಮಹಿಳೆ. ಹಳ್ಳಿಬೇರು ನಿವಾಸಿಯಾಗಿರುವ ಅಂಬಾ ಗುಡ್ಡ ಕುಸಿದು ಮೃತಪಟ್ಟಿದ್ದಾರೆ. ಏಕಾಏಕಿ ಗುಡ್ಡ ಕುಸಿದು ಬಿದ್ದ ಪರಿಣಾಮ ಅಂಬಾ ಮಣ್ಣಿನಡಿ ಸಿಲುಕಿ ಉಸಿರು ಗಟ್ಟಿ ಸಾವನ್ನಪ್ಪಿದ್ದಾರೆ. ಸ್ಥಳೀಯರು ಕಾರ್ಯಾಚರಣೆ ನಡೆಸಿ ಮಣ್ಣು ಸೇರಿಸಿ ಮೃತದೇಹ ಹೊರ ತೆಗೆದಿದ್ದಾರೆ. ಕೊಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.