alex Certify BIG NEWS: ರಾಜ್ಯದಲ್ಲಿಂದು ಮತ್ತೆ ಕೊರೋನಾ ಹೆಚ್ಚಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯದಲ್ಲಿಂದು ಮತ್ತೆ ಕೊರೋನಾ ಹೆಚ್ಚಳ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಹೆಚ್ಚಳವಾಗಿದ್ದು, ಇಂದು ಹೊಸದಾಗಿ 677 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 9,53,813 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು 427 ಜನ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 9,35,066 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಇಂದು 4 ಮಂದಿ ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ 12,354 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. 6324 ಸಕ್ರಿಯ ಪ್ರಕರಣಗಳಿದ್ದು, 112 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರಾಜಧಾನಿ ಬೆಂಗಳೂರಿನಲ್ಲಿ 444 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 4,07,269 ಕ್ಕೆ ಏರಿಕೆಯಾಗಿದೆ. ಇವತ್ತು 208 ಜನ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 3,98,183 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 4592 ಸಕ್ರಿಯ ಪ್ರಕರಣಗಳಿದ್ದು, ಇವತ್ತು ಬೆಂಗಳೂರಿನಲ್ಲಿ ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ. ಇದುವರೆಗೆ 4493 ಜನ ಸೋಂಕಿತರು ಸಾವನ್ನಪ್ಪಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...