alex Certify ಕ್ರಿಮಿನಲ್ ನ್ಯಾಯಾಲಯದಲ್ಲಿ ದಂಡನೆಗೆ ಒಳಗಾದ ಸರ್ಕಾರಿ ನೌಕರರ ವಿರುದ್ಧ ಶಿಸ್ತುಕ್ರಮ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕ್ರಿಮಿನಲ್ ನ್ಯಾಯಾಲಯದಲ್ಲಿ ದಂಡನೆಗೆ ಒಳಗಾದ ಸರ್ಕಾರಿ ನೌಕರರ ವಿರುದ್ಧ ಶಿಸ್ತುಕ್ರಮ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

ಬೆಂಗಳೂರು : ಕ್ರಿಮಿನಲ್ ನ್ಯಾಯಾಲಯದಲ್ಲಿ ದಂಡನೆಗೆ ಒಳಗಾದ ಸರ್ಕಾರಿ ನೌಕರರ ವಿರುದ್ಧ ಶಿಸ್ತುಕ್ರಮ ಜರುಗಿಸುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಕರ್ನಾಟಕ ನಾಗರಿಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು, 1957ರ ನಿಯಮ 14(i)ರ ಅನ್ವಯಿಕೆಗೆ ಸಂಬಂಧಿಸಿದಂತೆ ಹೊರಡಿಸಲಾಗಿರುವ ಉಲ್ಲೇಖಿತ ದಿನಾಂಕ:26.06.1996ರ ಸುತ್ತೋಲೆಯನ್ನು The Deputy Director of Collegiate Education Vs S.Nagoor Meera (AIR 1995 SC 1364)ರ ಪ್ರಕರಣದಲ್ಲಿ ಮಾನ್ಯ ಸರ್ವೋಚ್ಛ ನ್ಯಾಯಾಯಲವು ಪ್ರತಿಪಾದಿಸಿದ ತತ್ತ್ವಗಳ ಹಿನ್ನೆಲೆಯಲ್ಲಿ ಹೊರಡಿಸಲಾಗಿದೆ.

ಕ್ರಿಮಿನಲ್ ನ್ಯಾಯಾಲಯದಲ್ಲಿ ದಂಡನೆಗೆ ಒಳಗಾದ ಸರ್ಕಾರಿ ನೌಕರನು ಕ್ರಿಮಿನಲ್ ನ್ಯಾಯಾಲಯದ ದಂಡನೆ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಿದ್ದಾನೆ ಅಥವಾ ಇತರೆ ವ್ಯವಹರಣೆ ಹೂಡಿದ್ದಾನೆ ಅಥವಾ ಮೇಲಿನ ನ್ಯಾಯಾಲಯವು ಕ್ರಿಮಿನಲ್ ನ್ಯಾಯಾಲಯದ ದಂಡನೆ ಆದೇಶವನ್ನು ನಿಲಂಬನೆಯಲ್ಲಿಟ್ಟಿದ ಅಥವಾ ಆತನ ಮೇಲ್ಮನವಿ ಇತ್ಯರ್ಥದಲ್ಲಿರುವಾಗ ಜಾಮೀನಿನ ಮೇಲೆ ಬಿಡುಗಡೆ ಪಡೆದಿದ್ದಾನೆ ಎಂಬ ಕಾರಣಕ್ಕಾಗಿ ಕರ್ನಾಟಕ ನಾಗರಿಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು, 1957ರ ನಿಯಮ 14(i) ರನ್ನಯ ಕ್ರಮ ಜರುಗಿಸುವುದನ್ನು ತಡೆ ಹಿಡಿಯದೆ ಸಂವಿಧಾನದ 311(2)ರಡಿ ಎರಡನೇ ಪರಂತುಕದ ಸಮರ್ಥನೆ ಪಡೆದಿರುವ ಕರ್ನಾಟಕ ನಾಗರಿಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು, 1957ರ ನಿಯಮ 14(i) ರನ್ವಯ ಶಿಸ್ತಿನ ಕ್ರಮ ಕೈಗೊಳ್ಳತಕ್ಕದ್ದು ಎಂದು ಮತ್ತೊಮ್ಮೆ ಸ್ಪಷ್ಟಪಡಿಸಲಾಗಿದೆ.

ಉಲ್ಲೇಖಿತ ದಿನಾಂಕ: 26.6.1996ರ ಸುತ್ತೋಲೆ ಹಾಗೂ ಮೇಲೆ ನೀಡಲಾದ ಸೂಚನೆಗಳನ್ನು ಉಲ್ಲಂಘಿಸುವ ಪ್ರಕರಣಗಳಲ್ಲಿ ಸಂಬಂಧಪಟ್ಟವರ ವಿರುದ್ಧ ಕಾನೂನಿನ ಪ್ರಕಾರ ಕ್ರಮ ಜರುಗಿಸತಕ್ಕದ್ದು. ಸರ್ಕಾರದ ಎಲ್ಲಾ ಅಪರ ಮುಖ್ಯ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ ಮತ್ತು ಕಾರ್ಯದರ್ಶಿಯವರು ಈ ಸೂಚನೆಗಳನ್ನು ಅವರವರ ಕಾರ್ಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ನೇಮಕಾತಿ ಮತ್ತು ಶಿಸ್ತುಪ್ರಾಧಿಕಾರಿಗಳ ಗಮನಕ್ಕೆ ತರಲು ಸೂಚಿಸಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...