ನಾಗ್ಪುರ: ಬೀದಿ ನಾಯಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ ಆರೋಪದ ಮೇಲೆ 40 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ. ಈ ಅಸಹ್ಯಕರ ಘಟನೆ ನಡೆದಿರುವುದು ನಾಗ್ಪುರದ ಹುಡ್ಕೇಶ್ವರ ಪ್ರದೇಶದಲ್ಲಿ. ಈ ಕೃತ್ಯದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಈ ವಿಡಿಯೋದಲ್ಲಿ ಒಬ್ಬ ವ್ಯಕ್ತಿ ಹೆಣ್ಣು ಬೀದಿ ನಾಯಿಯೊಂದಿಗೆ ಲೈಂಗಿಕ ಕ್ರಿಯೆಗೆ ಪ್ರಯತ್ನಿಸುತ್ತಿರುವುದನ್ನು ಕಾಣಬಹುದು. ಶುಕ್ರವಾರ ಪೊಲೀಸರಿಗೆ ಮಾಹಿತಿ ನೀಡಿದ ಬಳಿಕ ಆರೋಪಿಯನ್ನು ಬಂಧಿಸಲಾಗಿದೆ. ಮಧ್ಯಪ್ರದೇಶದ ಬಾಲಾಘಾಟ್ ಜಿಲ್ಲೆಯ ಕೂಲಿಯವ ಈತ ಎಂದು ಗುರುತಿಸಲಾಗಿದೆ ಎಂದು ಹುಡ್ಕೇಶ್ವರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಲಲಿತ್ ವರ್ತಿಕರ್ ಹೇಳಿದ್ದಾರೆ.
ಭಾರತೀಯ ದಂಡ ಸಂಹಿತೆ ಮತ್ತು ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯಡಿ ಸೆಕ್ಷನ್ 377 (ಪ್ರಕೃತಿಯ ಕ್ರಮದ ವಿರುದ್ಧ ದೈಹಿಕ ಸಂಭೋಗ), 294 (ಅಶ್ಲೀಲತೆ) ಮತ್ತು ಇತರ ಅಪರಾಧಗಳ ಅಡಿಯಲ್ಲಿ ಆತನ ಮೇಲೆ ಆರೋಪದ ಕೇಸ್ ದಾಖಲು ಮಾಡಲಾಗಿದೆ.