alex Certify ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದು ಗುಡುಗು ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಗುಡುಗು ಬಿರುಗಾಳಿ ಸಹಿತ ಮಳೆ ಆಗಲಿದೆ. ಗಂಟೆಗೆ 30 ರಿಂದ 40 ಕಿ.ಮೀ. ವೇಗದ ಗಾಳಿ ಬೀಸಲಿದ್ದು, ಮುಂದಿನ ಒಂದು ವಾರ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಒಳನಾಡಿನ ಬೆಳಗಾವಿ, ಹಾವೇರಿ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳಲ್ಲಿ ಗುಡುಗು ಮಿಂಚು ಬಿರುಗಾಳಿ ಸಹಿತ ಮಳೆಯಾಗಲಿದೆ. ಧಾರವಾಡ, ಗದಗ, ಬೀದರ್, ಕಲಬುರಗಿ, ಕೊಪ್ಪಳ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ. ವೇಗದ ಗಾಳಿ ಬೀಸುವ ಸಾಧ್ಯತೆ ಇದೆ. ಯಾದಗಿರಿ, ರಾಯಚೂರು ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಗುಡುಗು ಮಿಂಚು ಬಿರುಗಾಳಿ ಸಹಿತ ಮಳೆಯಾಗಲಿದೆ. ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗುವ ಸಂಭವ ಇದೆ. ವೇಗದ ಗಾಳಿ ಬೀಸಲಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...