
ಮುಂದಿನ ವರ್ಷದೊಳಗೆ ರಾಜ್ಯದ ಎಲ್ಲ ಗ್ರಾಮ ಆಡಳಿತ ಅಧಿಕಾರಿಗಳಿಗೂ ಟ್ಯಾಬ್ ವಿತರಿಸಲಾಗುವುದು. ಈಗಾಗಲೇ ಸಣ್ಣ ಪ್ರಮಾಣದಲ್ಲಿ ಟ್ಯಾಬ್ ವಿತರಿಸಲಾಗಿದೆ. ಮುಂದಿನ ವರ್ಷ ಎಲ್ಲರಿಗೂ ವಿತರಿಸಲು ಸರ್ಕಾರ ಬದ್ಧವಾಗಿದೆ ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ತಿಳಿಸಿದ್ದಾರೆ.
ಗ್ರಾಮ ಆಡಳಿತ ಅಧಿಕಾರಿಗಳಿಗೆ ಲ್ಯಾಪ್ಟಾಪ್ ಅಥವಾ ಮೊಬೈಲ್ ನೀಡಬೇಕೆಂಬ ಬೇಡಿಕೆ ಇದ್ದು, ಕ್ಷೇತ್ರಗಳಲ್ಲಿ ಕೆಲಸ ಕಾರ್ಯನಿರ್ವಹಿಸುವ ಅಧಿಕಾರಿಗಳಿಗೆ ಲ್ಯಾಪ್ಟಾಪ್, ಮೊಬೈಲ್ ರೀತಿ ಕೆಲಸ ಮಾಡುವ ಟ್ಯಾಬ್ ನೀಡುವ ಕುರಿತಾಗಿ ಚಿಂತನೆ ನಡೆದಿದೆ. ಈಗಾಗಲೇ ಅಧಿಕಾರಿಗಳಿಗೆ ಸಣ್ಣ ಪ್ರಮಾಣದಲ್ಲಿ ಟ್ಯಾಬ್ ವಿತರಿಸಿದ್ದು, ಮುಂದಿನ ವರ್ಷ ಎಲ್ಲರಿಗೂ ಟ್ಯಾಬ್ ವಿತರಿಸಲಾಗುವುದು ಎಂದು ಹೇಳಿದ್ದಾರೆ.