alex Certify ಈಶ್ವರಪ್ಪ ಸಮಾವೇಶದಲ್ಲಿ ಬಿರಿಯಾನಿ ಹಂಚಿಕೆಗೆ ಬ್ರೇಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಈಶ್ವರಪ್ಪ ಸಮಾವೇಶದಲ್ಲಿ ಬಿರಿಯಾನಿ ಹಂಚಿಕೆಗೆ ಬ್ರೇಕ್

ಉಡುಪಿ: ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಉಡುಪಿ ಜಿಲ್ಲೆಯ ಬೈಂದೂರಿನ ಉಪ್ಪಂದದಲ್ಲಿ ಇಂದು ಬಿಜೆಪಿ ಬಂಡಾಯ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಕಾರ್ಯಕರ್ತರ ಸಮಾವೇಶ ನಡೆಸಿದ್ದಾರೆ.

ಸಮಾವೇಶದಲ್ಲಿ ಕಾರ್ಯಕರ್ತರಿಗೆ ನೀಡಲು ಬಿರಿಯಾನಿ ಸಿದ್ಧಪಡಿಸಲಾಗುತ್ತಿದ್ದು, ಮಾಹಿತಿ ಪಡೆದ ಚುನಾವಣೆಯ ಫ್ಲೈಯಿಂಗ್ ಸ್ಕ್ವಾಡ್ ದಾಳಿ ನಡೆಸಿ ಬಿರಿಯಾನಿ ಹಂಚಿಕೆ ಮಾಡದಂತೆ ತಡೆ ನೀಡಿದೆ. ಬಿರಿಯಾನಿ ವಿತರಿಸಿದಲ್ಲಿ ಚುನಾವಣಾ ವೆಚ್ಚಕ್ಕೆ ಸೇರ್ಪಡೆ ಮಾಡಲಾಗುವುದು ಎಂದು ಅಧಿಕಾರಿಗಳು ಹೇಳಿದ್ದು, ಹೀಗಾಗಿ ಬಿರಿಯಾನಿ ತಯಾರಿಸುವುದನ್ನು ನಿಲ್ಲಿಸಲಾಗಿದೆ. ಕಾದು ಸುಸ್ತಾದ ಕಾರ್ಯಕರ್ತರು ಅಲ್ಲಿಂದ ತೆರಳಿದ್ದಾರೆ. ಸಮಾವೇಶದಲ್ಲಿ ಮಾತನಾಡಿದ ಈಶ್ವರಪ್ಪ ಯಡಿಯೂರಪ್ಪ ಕುಟುಂಬದ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...