alex Certify ಮುಂಬರುವ ಪಂಚಾಯಿತಿ, ಬಿಬಿಎಂಪಿ ಚುನಾವಣೆ ಗೆಲ್ಲಲು ಸಿಎಂ ಸಿದ್ದರಾಮಯ್ಯ ಪ್ಲಾನ್; ಜಿಲ್ಲಾ ಉಸ್ತುವಾರಿ ಸಚಿವರಿಗೆ ಟಾಸ್ಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮುಂಬರುವ ಪಂಚಾಯಿತಿ, ಬಿಬಿಎಂಪಿ ಚುನಾವಣೆ ಗೆಲ್ಲಲು ಸಿಎಂ ಸಿದ್ದರಾಮಯ್ಯ ಪ್ಲಾನ್; ಜಿಲ್ಲಾ ಉಸ್ತುವಾರಿ ಸಚಿವರಿಗೆ ಟಾಸ್ಕ್

ರಾಜ್ಯ ಕಾಂಗ್ರೆಸ್ ಸರ್ಕಾರ ಜಿಲ್ಲಾ ಉಸ್ತುವಾರಿ ಮಂತ್ರಿಗಳನ್ನು ನೇಮಿಸಿ ಆದೇಶಿಸಿದ್ದು, ಮಂತ್ರಿಗಳ ಆಯ್ಕೆಯು ಮುಂಬರುವ ಪಂಚಾಯತಿ ಮತ್ತು ಲೋಕಸಭೆ ಚುನಾವಣೆಗೆ ಮುನ್ನುಡಿ ಬರೆದಂತಿದೆ. ವಿಧಾನಸಭೆ ಚುನಾವಣೆಯ ಗೆಲುವಿನ ಗತಿಯನ್ನು ಬಳಸಿಕೊಂಡು ಮುಂಬರುವ 2024ರ ಲೋಕಸಭೆ ಚುನಾವಣೆಯಲ್ಲಿ ಕೆಪಿಸಿಸಿಗೆ ಕನಿಷ್ಠ 20 ಸ್ಥಾನಗಳ ಗುರಿಯನ್ನು ಕಾಂಗ್ರೆಸ್ ಹೈಕಮಾಂಡ್ ನೀಡಿದೆ. ಹೀಗಾಗಿ ಪ್ರತಿ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಟಾಸ್ಕ್ ನೀಡಿದ್ದು ಉಸ್ತುವಾರಿ ಹೊತ್ತ ಜಿಲ್ಲೆಗಳಲ್ಲಿ ಹೆಚ್ಚಿನ ಸೀಟ್ ಗೆಲ್ಲುವಂತೆ ಹೇಳಲಾಗಿದೆ.

ವಿಧಾನಸಭೆ ಚುನಾವಣೆಯ ಭರ್ಜರಿ ಗೆಲುವಿನ ನಂತರ ಸೆಪ್ಟೆಂಬರ್-ಅಕ್ಟೋಬರ್ ನಲ್ಲಿ ನಡೆಯಲಿರುವ ಪಂಚಾಯತ್ ಚುನಾವಣೆ ಮತ್ತು ಬಿಬಿಎಂಪಿ ಚುನಾವಣೆಗಳಲ್ಲಿಯೂ ಕಾಂಗ್ರೆಸ್ ಮುನ್ನಡೆ ಸಾಧಿಸುವತ್ತ ಕಣ್ಣಿಟ್ಟಿದೆ.

ರಾಜ್ಯ ಸರ್ಕಾರ ಐದು ಗ್ಯಾರಂಟಿಗಳ ಅನುಷ್ಠಾನಕ್ಕೆ ಮುಂದಾಗಿದ್ದು ಈಗಾಗಲೇ ಯೋಜನೆ ಜಾರಿ ದಿನಾಂಕಗಳನ್ನೂ ಪ್ರಕಟಿಸಿದೆ. ಇದರೊಂದಿಗೆ ಪ್ರತಿಪಕ್ಷಗಳ ಟೀಕೆಗಳನ್ನು ಎದುರಿಸಿ ಸಮರ್ಥವಾಗಿ ಉತ್ತರಿಸುವಲ್ಲಿ ಜಿಲ್ಲೆಯ ಸಚಿವರು ಯಶಸ್ವಿಯಾಗಬೇಕೆಂದು ಸಿದ್ದರಾಮಯ್ಯ ಬಯಸಿದ್ದಾರೆ. ತ್ರೈಮಾಸಿಕ ಪರಿಶೀಲನಾ ಸಭೆಗಳನ್ನು ನಡೆಸಬೇಕು, ಸಚಿವರು ತಮ್ಮ ಜಿಲ್ಲೆಗಳಿಗೆ ಪ್ರವಾಸ ಮಾಡಬೇಕು ಮತ್ತು ಗ್ಯಾರಂಟಿಗಳ ಬಗ್ಗೆ ಪ್ರತಿಕ್ರಿಯೆಗಾಗಿ ಜನರೊಂದಿಗೆ ಸಂವಹನ ನಡೆಸಬೇಕು ಎಂದು ಅವರು ಹೇಳಿದ್ದಾರೆ.

ಮೈಸೂರು ಮತ್ತು ಚಾಮರಾಜನಗರ ಲೋಕಸಭಾ ಕ್ಷೇತ್ರಗಳೆರಡನ್ನೂ ಮರಳಿ ಗೆಲ್ಲುವ ಉತ್ಸಾಹದಲ್ಲಿರುವ ಸಿದ್ದರಾಮಯ್ಯ ಅವರು ತಮ್ಮ ಆಪ್ತರಾದ ಹೆಚ್.ಸಿ. ಮಹದೇವಪ್ಪ ಮತ್ತು ಕೆ. ವೆಂಕಟೇಶ್ ಅವರ ಮೇಲೆ ವಿಶ್ವಾಸವಿಟ್ಟು ಕ್ರಮವಾಗಿ ಅವರಿಗೆ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಉಸ್ತುವಾರಿ ನೀಡಿದ್ದಾರೆ.

ರಾಜಕೀಯ ಸವಾಲುಗಳ ಹೊರತಾಗಿ ಮಹದೇವಪ್ಪ ಅವರು ದಸರಾ, ತಲಕಾಡಿನಲ್ಲಿ ಪಂಚಲಿಂಗ ದರ್ಶನ, ಟಿ ನರಸೀಪುರದಲ್ಲಿ ಕುಂಭಮೇಳಕ್ಕೆ ಸಿದ್ಧತೆ ನಡೆಸಬೇಕಿದೆ.

ಸಿದ್ದರಾಮಯ್ಯನವರು ಎರಡು ಸ್ಥಾನಗಳನ್ನು ಕಬಳಿಸಿ ಹೈಕಮಾಂಡ್ ನಿರೀಕ್ಷೆಯನ್ನು ಈಡೇರಿಸಿದರೆ ಉನ್ನತ ಹುದ್ದೆಯಲ್ಲಿ ಅವರ ಸ್ಥಾನ ಗಟ್ಟಿಯಾಗಬಹುದು. ಅವರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬೆಂಬಲ ನೀಡಲಿದ್ದಾರೆ.

ತನ್ನ 15 ಶಾಸಕರನ್ನು ಹೊಂದಿರುವ ಬಿಜೆಪಿಯ ಬೆಂಗಳೂರಿನ ಕೋಟೆಯನ್ನು ಭೇದಿಸುವ ಮಿಷನ್ ಅನ್ನು ಅವರು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಗೆ ನೀಡಿದ್ದಾರೆ.

ಬೈರತಿ ಸುರೇಶ್ ಅವರಿಗೆ ಕೋಲಾರ ಜಿಲ್ಲಾ ಉಸ್ತುವಾರಿ ನೀಡಲಾಗಿದೆ. ಆದರೆ ಇದನ್ನು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ಅವರ ಬೆಂಬಲಿಗರು ವಿರೋಧಿಸಿದ್ದಾರೆ. ಕೋಲಾರ ಮೂಲದವರಾದ ಕೆ.ಹೆಚ್. ಮುನಿಯಪ್ಪಗೆ ಬೆಂಗಳೂರು ಗ್ರಾಮಾಂತರ ಉಸ್ತುವಾರಿ ನೀಡಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...