
ಕೇಂದ್ರ ಸರ್ಕಾರದ ಮಿಷನ್ ಶಕ್ತಿ ಯೋಜನೆಯಡಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಅನುಷ್ಠಾನಗೊಳಿಸಲಾಗುತ್ತಿರುವ ‘ಜಿಲ್ಲಾ ಮಹಿಳಾ ಸಬಲೀಕರಣ ಘಟಕ’ಕ್ಕೆ ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ, ಜಿಲ್ಲಾಧಿಕಾರಿರವರ ಅನುಮೋದನೆಯಂತೆ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.
ಸೆಪ್ಟೆಂಬರ್ 11 ರಂದು ಬೆಳಗ್ಗೆ 11 ಗಂಟೆಗೆ ಕೊಡಗು ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಿಷನ್ ಸಂಯೋಜಕರ, ಪ್ರಧಾನಮಂತ್ರಿ ಮಾತೃವಂದನಾ ಜಿಲ್ಲಾ ಸಂಯೋಜಕರು ಹಾಗೂ ಹಣಕಾಸು ಸಾಕ್ಷರತೆ ಮತ್ತು ಲೆಕ್ಕ ಪರಿಶೋಧಕರ ಹುದ್ದೆಗೆ ಜಿಲ್ಲಾಧಿಕಾರಿ ಅವರ ಕಚೇರಿ, ಜಿಲ್ಲಾಡಳಿತ ಭವನ, ಮಡಿಕೇರಿ ಇಲ್ಲಿ ಸಂದರ್ಶನ ನಡೆಯಲಿದೆ.
ಆದ್ದರಿಂದ ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ತಮ್ಮ ಎಲ್ಲಾ ಮೂಲ ದಾಖಲಾತಿಗಳೊಂದಿಗೆ ಸೆಪ್ಟೆಂಬರ್, 11 ರಂದು ಸಂದರ್ಶನಕ್ಕೆ 30 ನಿಮಿಷ ಮುಂಚೆ ಹಾಜರಾಗುವುದು. ಹೆಚ್ಚಿನ ಮಾಹಿತಿಗೆ ದೂ.ಸಂ. 08272-224451 ಅನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ನಟರಾಜು ಅವರು ತಿಳಿಸಿದ್ದಾರೆ.