alex Certify ಬೆಂಗಳೂರು ಸೇರಿ 23 ಜಿಲ್ಲೆಗಳಲ್ಲಿ 11 ಸೆ.ಮೀ. ವರೆಗೆ ಭಾರಿ ಮಳೆ ಮುನ್ಸೂಚನೆ: ಯೆಲ್ಲೋ ಅಲರ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರು ಸೇರಿ 23 ಜಿಲ್ಲೆಗಳಲ್ಲಿ 11 ಸೆ.ಮೀ. ವರೆಗೆ ಭಾರಿ ಮಳೆ ಮುನ್ಸೂಚನೆ: ಯೆಲ್ಲೋ ಅಲರ್ಟ್

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ 23 ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಯಲ್ಲಿ ಭಾರಿ ಮಳೆ ಆಗುವ ಸಂಭವ ಇದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ.

ಬೆಳಗಾವಿ, ಬಾಗಲಕೋಟೆ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಕೊಡಗು, ಕೋಲಾರ, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಯಲ್ಲಿ 6ರಿಂದ 11 ಸೆಂ.ಮೀ. ವರೆಗೆ ಮಳೆಯಾಗುವ ಸಂಭವವಿದೆ.

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಹೆಚ್ಚಿನ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ. ಗುರುವಾರದಿಂದ ಉತ್ತರ ಒಳನಾಡು, ಶುಕ್ರವಾರದಿಂದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಸ್ವಲ್ಪ ಕಡಿಮೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...