ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಮಲೆನಾಡು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ನಾಲ್ಕು ದಿನ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಅದೇ ರೀತಿ, ಕೊಡಗು, ಮೈಸೂರು, ದಾವಣಗೆರೆ, ಬಾಗಲಕೋಟೆ, ಬೀದರ್, ಬೆಳಗಾವಿ, ಧಾರವಾಡ, ಕಲಬುರ್ಗಿ, ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.