ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಮೂರು ದಿನ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಾರ್ಚ್ 22 ರಿಂದ 24ರ ವರೆಗೆ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಮಲೆನಾಡು ಭಾಗದ ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರಿನಲ್ಲಿ ಮಳೆಯಾಗಲಿದೆ.
ಮಾರ್ಚ್ 22ರಂದು ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಶಿವಮೊಗ್ಗದಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಮಲೆನಾಡು, ದಕ್ಷಿಣ ಒಳನಾಡು, ಕರಾವಳಿ ಭಾಗದ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಲಿದೆ. ಕೆಲವು ಜಿಲ್ಲೆಗಳಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನ ಏರಿಳಿತವಾಗಲಿದೆ. ಬಿಸಿಲು ಹೆಚ್ಚಾದ ಕಡೆಗಳಲ್ಲಿ ಮಳೆ ಬೀಳುವ ಸಂಭವ ಇದೆ ಎಂದು ಹೇಳಲಾಗಿದೆ.