alex Certify 3 ದಿನ ಭಾರೀ ಮಳೆ, ಕರಾವಳಿಯಲ್ಲಿ ಯೆಲ್ಲೋ ಅಲರ್ಟ್: ದಕ್ಷಿಣ ಒಳನಾಡಿನಲ್ಲಿ ಗುಡುಗು-ಸಿಡಿಲಿನ ಆರ್ಭಟದೊಂದಿಗೆ ವರ್ಷಧಾರೆ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

3 ದಿನ ಭಾರೀ ಮಳೆ, ಕರಾವಳಿಯಲ್ಲಿ ಯೆಲ್ಲೋ ಅಲರ್ಟ್: ದಕ್ಷಿಣ ಒಳನಾಡಿನಲ್ಲಿ ಗುಡುಗು-ಸಿಡಿಲಿನ ಆರ್ಭಟದೊಂದಿಗೆ ವರ್ಷಧಾರೆ ಸಾಧ್ಯತೆ

ಬೆಂಗಳೂರು: ರಾಜ್ಯದ ಹಲವೆಡೆ ಮಳೆ ಮುಂದುವರೆದಿದ್ದು, ಜೂನ್ 10 ರಿಂದ 13 ರವರೆಗೆ ಮುಂಗಾರು ಚುರುಕುಗೊಳ್ಳಲಿದೆ. ಇದರಿಂದ ರಾಜ್ಯದ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

5 ದಿನಗಳ ಹಿಂದೆಯೇ ಮುಂಗಾರು ರಾಜ್ಯಕ್ಕೆ ಪ್ರವೇಶಿಸಿದ್ದರೂ, ಎರಡು ದಿನಗಳ ನಂತರ ಅನೇಕ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಇಳಿಮುಖವಾಗಿದೆ. ಕರಾವಳಿಯ ಉತ್ತರಕನ್ನಡ, ದಕ್ಷಿಣಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಜೂನ್ 10 ರಿಂದ 13 ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು-ಸಿಡಿಲಿನ ಆರ್ಭಟದೊಂದಿಗೆ ಮಳೆಯಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಈ ವಾರ ಒಣಹವೆ ಇರಲಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...