
ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 4246 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 30.17.572 ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಇಂದು ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ. ಇದುವರೆಗೆ 38,357 ಸೋಂಕಿತರು ಸಾವನ್ನಪ್ಪಿದ್ದಾರೆ. ಇವತ್ತು 362 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 29,61,772 ಜನ ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ 17,414 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ ಶೇಕಡ 3.33 ರಷ್ಟು ಇದೆ.
ರಾಜಧಾನಿ ಬೆಂಗಳೂರಿನಲ್ಲಿ ಇಂದು ಹೊಸದಾಗಿ 3605 ಜನರಿಗೆ ಸೋಂಕು ತಗುಲಿದೆ. ಇಬ್ಬರು ಮೃತಪಟ್ಟಿದ್ದಾರೆ. 264 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 14,762 ಸಕ್ರಿಯ ಪ್ರಕರಣಗಳಿವೆ.
ಹಾವೇರಿ ಜಿಲ್ಲೆ ಹೊರತುಪಡಿಸಿ ಎಲ್ಲ ಜಿಲ್ಲೆಗಳಲ್ಲಿಯೂ ಇಂದು ಕೊರೊನಾ ಸೋಂಕು ತೀವ್ರ ಏರಿಕೆ ಕಂಡಿದೆ.
ಬಳ್ಳಾರಿ 34, ಬೆಳಗಾವಿ 31, ಬೆಂಗಳೂರು ಗ್ರಾಮಾಂತರ 19, ಬೆಂಗಳೂರು ನಗರ 3605, ಚಿಕ್ಕಮಗಳೂರು 12, ದಕ್ಷಿಣ ಕನ್ನಡ 111, ಧಾರವಾಡ 26, ಹಾಸನ 20, ಕಲಬುರ್ಗಿ 28, ಕೊಡಗು 20, ಕೋಲಾರ 24, ಮಂಡ್ಯ 36, ಮೈಸೂರು 59, ಶಿವಮೊಗ್ಗ 22, ತುಮಕೂರು 43, ಉಡುಪಿ 88, ಉತ್ತರಕನ್ನಡ 17, ವಿಜಯಪುರ 14 ಹೊಸ ಪ್ರಕರಣ ವರದಿಯಾಗಿವೆ. ಬೆಂಗಳೂರು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಕೊರೋನಾ ಸಾವಿನ ವರದಿಯಾಗಿಲ್ಲ.

