alex Certify ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ನಾಲ್ಕು ದಿನ ಗುಡುಗು, ಮಿಂಚು ಸಹಿತ ಮಳೆ ಅಬ್ಬರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ನಾಲ್ಕು ದಿನ ಗುಡುಗು, ಮಿಂಚು ಸಹಿತ ಮಳೆ ಅಬ್ಬರ

ಬೆಂಗಳೂರು: ಆರಬ್ಬಿಸಮುದ್ರ ಮತ್ತು ಬಂಗಾಳಕೊಲ್ಲಿಯಲ್ಲಿ ಮಳೆಗೆ ಪೂರಕ ವಾತಾವರಣವಿದ್ದು, ಮುಂದಿನ 3 -4 ದಿನ ಬಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ವಿದರ್ಭದಿಂದ ಆಂಧ್ರಪ್ರದೇಶದ ದಕ್ಷಿಣದವರೆಗೆ ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈಸುಳಿಗಾಳಿ ಉಂಟಾಗಿದೆ. ಅರಬ್ಬಿ ಸಮುದ್ರದ ಕೇರಳ ಭಾಗದಲ್ಲಿಯೂ ಮೇಲ್ಮೈ ಸುಳೆಗಾಳಿ ಉಂಟಾಗಿದ್ದು, ರಾಜ್ಯದ ದಕ್ಷಿಣ ಮತ್ತು ಉತ್ತರ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಗದಗ, ಕೊಪ್ಪಳ, ಹಾವೇರಿ, ಧಾರವಾಡ, ಬಳ್ಳಾರಿ, ದಾವಣಗೆರೆ, ಬೆಳಗಾವಿ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೋಲಾರ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ ಆಗುವ ಸಾಧ್ಯತೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಸೋಮವಾರದಿಂದ ಮಂಗಳವಾರ ಬೆಳಿಗ್ಗೆಯವರೆಗೆ ಧಾರವಾಡ, ಗದಗ, ಕಲಬುರ್ಗಿ, ಹಾವೇರಿ, ಚಿತ್ರದುರ್ಗ, ದಾವಣಗೆರೆ, ರಾಮನಗರ, ಮೈಸೂರು, ಚಾಮರಾಜನಗರ, ಚಿಕ್ಕಮಗಳೂರು ಹಾಗೂ ಕರಾವಳಿಯ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಮಂಗಳವಾರದ ನಂತರ ಕರಾವಳಿ ಮತ್ತು ಒಳನಾಡು ಜಿಲ್ಲೆಯ ಹಲವೆಡೆ ಮಳೆ ಮುಂದುವರೆಯಲಿದೆ ಎಂದು ಮುನ್ನೆಚ್ಚರಿಕೆ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...