ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಸಚಿವ ಸಂಪುಟ ಸಭೆ ನಡೆಯಲಿದೆ. ವಿಧಾನಸೌಧದಲ್ಲಿ ಮಧ್ಯಾಹ್ನ 12 ಗಂಟೆಗೆ ಸಚಿವ ಸಂಪುಟ ಸಭೆ ನಡೆಯಲಿದ್ದು, ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆಯಾದ ನಂತರ ಮೊದಲ ಸಭೆ ಇದಾಗಿದೆ.
ಸಚಿವ ಆರ್. ಅಶೋಕ್ ಮತ್ತು ಜೆ.ಸಿ. ಮಾಧುಸ್ವಾಮಿ ಅವರಿಗೆ ಜಿಲ್ಲಾ ಉಸ್ತುವಾರಿ ನೀಡದ ಹಿನ್ನೆಲೆಯಲ್ಲಿ ಅವರ ನಡೆ ಕುತೂಹಲ ಮೂಡಿಸಿದೆ. ಇನ್ನು ಸಂಪುಟ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಬದಲಾವಣೆಯ ಬಗ್ಗೆ ಪ್ರಸ್ತಾಪ ಮಾಡುವ ಸಾಧ್ಯತೆಯಿದೆ.
ಸಚಿವರಾದ ಡಾ.ಕೆ. ಸುಧಾಕರ್, ಎಂಟಿಬಿ ನಾಗರಾಜ್ ಹಾಗೂ ಆನಂದ್ ಸಿಂಗ್ ಅವರು ಉಸ್ತುವಾರಿ ಬದಲಾವಣೆ ಮಾಡಿರುವ ಬಗ್ಗೆ ಬೇಸರಗೊಂಡಿದ್ದು, ಸಚಿವ ಸಂಪುಟ ಸಭೆಯಲ್ಲಿ ಇದರ ಬಗ್ಗೆ ಪ್ರಸ್ತಾಪಿಸಲಿದ್ದಾರೆ ಎಂದು ಹೇಳಲಾಗಿದೆ.