ಬೆಂಗಳೂರು: ದುರ್ಬಲವಾಗಿದ್ದ ಮುಂಗಾರು ಮತ್ತೆ ಚುರುಕಾಗಿದ್ದು, 4 ದಿನ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಉತ್ತಮ ಮಳೆ ಆಗಲಿದೆ ಎಂದು ಅವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ತುಮಕೂರು, ರಾಮನಗರ ಜಿಲ್ಲೆಗಳಿಗೆ ಮುಂದಿನ ಎರಡು ದಿನ ಯೆಲ್ಲೋ ಅಲರ್ಟ್ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಂಭವವಿದೆ.
ಉತ್ತರ ಒಳನಾಡಿನ ಕಲಬುರಗಿ, ಬೀದರ್, ವಿಜಯಪುರ, ರಾಯಚೂರು, ಯಾದಗಿರಿ ಜಿಲ್ಲೆಗಳಿಗೆ ಸೆಪ್ಟಂಬರ್ 3 ಮತ್ತು 4ರಂದು ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.