ಬೆಂಗಳೂರು: ವಾಯುಭಾರ ಕುಸಿತ ಉಂಟಾಗಿರುವುದರಿಂದ ರಾಜ್ಯದ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ನವೆಂಬರ್ 4, 5 ರಂದು ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ.
ಹವಾಮಾನ ಇಲಾಖೆ ಈ ಬಗ್ಗೆ ಮುನ್ಸೂಚನೆ ನೀಡಿದ್ದು, ಲಕ್ಷದ್ವೀಪ ಪ್ರದೇಶದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಕಾರಣ ಬಹುತೇಕ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಬಳ್ಳಾರಿ, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ಕೊಪ್ಪಳ, ಹಾವೇರಿ, ಉತ್ತರಕನ್ನಡ, ದಕ್ಷಿಣಕನ್ನಡ, ಬೆಳಗಾವಿ, ಉಡುಪಿ, ಧಾರವಾಡ, ಗದಗ ಸೇರಿದಂತೆ 22 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ನವಂಬರ್ 7 ರವರೆಗೆ ಮಳೆಯಾಗಲಿದೆ.