ತಮಿಳುನಾಡಿನ ಸೇಲಂನಲ್ಲಿ ಶನಿವಾರ ಭೀಕರ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಕಾರೊಂದು ರಸ್ತೆಯಲ್ಲಿ ನಿಂತಿದ್ದ ಶಿಕ್ಷಕನಿಗೆ ಡಿಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಘಟನೆ ಸಿಸಿ ಟಿವಿಯಲ್ಲಿ ದಾಖಲಾಗಿದ್ದು, ಆಘಾತಕಾರಿ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ವರದಿಯ ಪ್ರಕಾರ, ಶಿಕ್ಷಕ ಮತ್ತು ಮಹಿಳೆ ರಸ್ತೆಯ ಬದಿಯಲ್ಲಿ ನಿಂತಿದ್ದರು. ಆ ವೇಳೆ ವೇಗವಾಗಿ ಬಂದ ಕಾರು ನಿಯಂತ್ರಣ ತಪ್ಪಿ ಶಿಕ್ಷಕನ ಬೈಕಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಶಿಕ್ಷಕ ಹಲವಾರು ಮೀಟರ್ ದೂರಕ್ಕೆ ಎಸೆಯಲ್ಪಟ್ಟಿದ್ದಾರೆ. ಮಹಿಳೆ ಮತ್ತು ಸ್ಥಳೀಯರು ಸಹಾಯಕ್ಕೆ ಧಾವಿಸಿದರೂ, ಚಾಲಕ ಕಾರನ್ನು ನಿಲ್ಲಿಸದೆ ಪರಾರಿಯಾಗಿದ್ದಾನೆ.
ಇದೇ ರೀತಿಯ ಘಟನೆಯೊಂದು ಕಳೆದ ವಾರ ಮುಂಬೈನ ಘಾಟ್‌ಕೋಪರ್‌ನಲ್ಲಿ ನಡೆದಿದೆ. ಮಾರ್ಚ್ 22 ರಂದು ಲಾಲ್ ಬಹದ್ದೂರ್ ಶಾಸ್ತ್ರಿ (ಎಲ್‌ಬಿಎಸ್) ರಸ್ತೆಯಲ್ಲಿ ವೇಗವಾಗಿ ಬಂದ ಕಾರು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಪ್ರಿನ್ಸ್ ಚೌಧರಿ ಸಾವನ್ನಪ್ಪಿದ್ದಾರೆ. ಅವರು ಝೆಪ್ಟೋ ಡೆಲಿವರಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಈ ಸಂಬಂಧ ಘಾಟ್‌ಕೋಪರ್ ಪೊಲೀಸರು ಕಾರು ಚಾಲಕನನ್ನು ಬಂಧಿಸಿದ್ದಾರೆ.
#JUSTIN சேலம் ; பூலாம்பட்டி அருகே சாலையோரம் நின்றிருந்த ஆசிரியர் மீது அதிவேகமாக வந்த கார் மோதி உயிரிழப்பு
விபத்தின் சிசிடிவி காட்சி#Salem #Poolampatti #Accident #CCTV #News pic.twitter.com/A8v04xbjBd— M.M.NEWS உடனடி செய்திகள் (@rajtweets10) March 29, 2025